ಅಂಗನವಾಡಿ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಲ್ಲ

0
69

ಕಡಿಮೆ ವಿದ್ಯಾರ್ಹತೆಯ ಅಂಗನವಾಡಿ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಲ್ಲ ಎಂದು ಸಚಿವ ಹಾಲಪ್ಪ ಆಚಾರ್‌ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಸುಮಾರು 66,361 ಅಂಗನವಾಡಿ ಕೇಂದ್ರಗಳಿವೆ. ಇತ್ತೀಚಿಗೆ ರಾಜ್ಯ ಸರಕಾರ ನೂತನ 4,244 ಅಂಗನವಾಡಿ ಕೇಂದ್ರಗಳ ಸ್ಥಾಪನೆಗೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಯಕರ್ತೆಯರ ಪೈಕಿ 732 ಜನ ಸ್ನಾತಕೋತ್ತರ ಪದವಿಧರರಿದ್ದಾರೆ. 6,017 ಪದವೀಧರರು, 14,303 ಪಿಯುಸಿ ಮತ್ತು 40,786 ಅಂಗನವಾಡಿ ಕಾರ್ಯಕರ್ತೆಯರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿದ್ದಾರೆ. ಪಿಯುಸಿ ಗಿಂತ ಹೆಚ್ಚಿನ ವಿದ್ಯಾಹರ್ತೆ ಹೊಂದಿರುವ ಸುಮಾರು 20 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಮೊದಲ ಹಂತದಲ್ಲಿ ಎನ್‌ಇಪಿಯನ್ನು ಅನುಷ್ಠಾನಗೊಳಿಸಲಾಗುವುದು. ಇನ್ನುಳಿದ ಅಂಗನವಾಡಿ ಕೇಂದ್ರಗಳಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರು ಕಡಿಮೆ ವಿದ್ಯಾರ್ಹತೆ ಹೊಂದಿದ್ದು, ಅವರಿಗೆ ಹೆಚ್ಚಿನ ತರಬೇತಿ ನೀಡುವ ಮೂಲಕ ಆ ಕೇಂದ್ರಗಳಲ್ಲೂ ನೂತನ ಪಠ್ಯಕ್ರಮ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿರುವ ಸಂಧರ್ಭದಲ್ಲಿ 6 ತಿಂಗಳಿನಿಂದ 1 ವರ್ಷದ ವರೆಗೂ ಡಿಪ್ಲಮೋ ತರಬೇತಿ ನೀಡಲು ಯೋಜಿಸಲಾಗಿದೆ. ಯಾವುದೇ ಹಂತದಲ್ಲಿಯೂ ಅವರನ್ನ ಕೆಲಸದಿಂದ ತಗೆಯುವ ಪ್ರಶ್ನೆ ಸರಕಾರದ ಮುಂದೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here