No menu items!
11.3 C
Munich
Sunday, September 20, 2026

ಗಣಿ ಲೂಟಿ ಮಾಡಿ ಜೈಲಲ್ಲಿದ್ದವನಲ್ಲ ನಾನು, ರಾಜಕೀಯ ಹೋರಾಟ ಮಾಡಿಕೊಂಡು ಬಂದವನು: ಬಿ.ಕೆ. ಹರಿಪ್ರಸಾದ್

Must read

ಗಣಿ ಲೂಟಿ ಮಾಡಿ ಜೈಲಲ್ಲಿದ್ದವನಲ್ಲ ನಾನು, ರಾಜಕೀಯ ಹೋರಾಟ ಮಾಡಿಕೊಂಡು ಬಂದವನು: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಮಾಡಿರುವ ಟೀಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಹುಚ್ಚರಿಗೆಲ್ಲ ನಾನು ಉತ್ತರ ಕೊಡಲ್ಲ” ಎಂದು ಹೇಳಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಕೆ. ಹರಿಪ್ರಸಾದ್, “ಜನಾರ್ದನ ರೆಡ್ಡಿಗೆ ವಂದೇ ಮಾತರಂನ ಎರಡು ಪ್ಯಾರಾ ಆದರೂ ಹಾಡೋಕೆ ಬರುತ್ತಾ ಎಂದು ಕೇಳಿ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಇದೇ ವೇಳೆ, ತಮ್ಮ ರಾಜಕೀಯ ಹಿನ್ನೆಲೆಯನ್ನು ಉಲ್ಲೇಖಿಸಿದ ಹರಿಪ್ರಸಾದ್, “ಗಣಿ ಕಳ್ಳ ಸರ್ಕಾರದ ಗಣಿ ಲೂಟಿ ಮಾಡಿ ಜೈಲಿನಲ್ಲಿ ಇದ್ದವನಲ್ಲ ನಾನು. ರಾಜಕೀಯ ಹೋರಾಟ ಮಾಡಿಕೊಂಡು ಬಂದಿರುವವನು. ಇವರಿಗೆಲ್ಲ ಉತ್ತರ ಕೊಡಲು ಹೋಗುವುದಿಲ್ಲ” ಎಂದು ಹೇಳಿದ್ದಾರೆ.
“ಇವರು ಅಷ್ಟು ದೇಶಭಕ್ತಿ, ದೇಶಪ್ರೇಮಿಗಳಾಗಿದ್ದರೆ ಖಾಕಿ ಚಡ್ಡಿ, ಕರಿ ಟೋಪಿ ಹಾಕಿಕೊಂಡು ಶಾಖೆಯಲ್ಲಿ ರಾಷ್ಟ್ರಗೀತೆ ಹೇಳುವುದಕ್ಕೆ ಹೇಳಿ. ಇವರಿಗೆಲ್ಲ ಉತ್ತರ ಕೊಟ್ಟರೆ ನಾವೂ ಹುಚ್ಚರಾಗುತ್ತೇವೆ” ಎಂದು ಜನಾರ್ದನ ರೆಡ್ಡಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ ಸರ್ಕಾರದ ವಂದೇ ಮಾತರಂಗೆ ಸಂಬಂಧಿಸಿದ ಎರಡು ಚರಣಗಳ ಆದೇಶದ ವಿಚಾರವಾಗಿ ಈಗಾಗಲೇ ರಾಜಕೀಯ ಚರ್ಚೆ ತೀವ್ರಗೊಂಡಿದ್ದು, ಇದೇ ವಿಚಾರದಲ್ಲಿ ಹರಿಪ್ರಸಾದ್ ಹಾಗೂ ಜನಾರ್ದನ ರೆಡ್ಡಿ ನಡುವೆ ವಾಕ್ಸಮರ ನಡೆದಿದೆ.
ಇದೇ ವೇಳೆ, ಸರ್ಕಾರ ಮತ್ತು ಪಕ್ಷದ ನಡುವೆ ಸಮನ್ವಯ ಸಾಧಿಸುವ ಉದ್ದೇಶದಿಂದ ರಾಜ್ಯದಲ್ಲಿ ಶೀಘ್ರವೇ ಪೊಲಿಟಿಕಲ್ ಅಫೇರ್ಸ್ ಕಮಿಟಿ ರಚಿಸಲಾಗುವುದು ಎಂದು ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.
“ಪೊಲಿಟಿಕಲ್ ಅಫೇರ್ಸ್ ಕಮಿಟಿ ಎಲ್ಲಾ ರಾಜ್ಯಗಳಲ್ಲೂ ಇದೆ. ಕರ್ನಾಟಕದಲ್ಲೂ ಸದ್ಯದಲ್ಲೇ ಮಾಡುತ್ತೇವೆ. ಇತ್ತೀಚೆಗೆ ರಾಜ್ಯಕ್ಕೆ ಬಂದಿದ್ದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಆದಷ್ಟು ಬೇಗ ಪೊಲಿಟಿಕಲ್ ಅಫೇರ್ಸ್ ಕಮಿಟಿ ರಚಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಆ ತಯಾರಿಯಲ್ಲಿ ನಾವು ಇದ್ದೇವೆ” ಎಂದು ಅವರು ಹೇಳಿದ್ದಾರೆ.
ಈ ಸಂಬಂಧ ಈಗಾಗಲೇ ಪಕ್ಷದ ಹಲವು ನಾಯಕರಿಂದ ಸಲಹೆ ಮತ್ತು ಸೂಚನೆಗಳನ್ನು ಕೇಳಲಾಗಿದೆ. ಎಲ್ಲರ ಅಭಿಪ್ರಾಯಗಳನ್ನು ಪಡೆದು ತೀರ್ಮಾನ ಕೈಗೊಂಡ ಬಳಿಕ ಆದಷ್ಟು ಬೇಗ ಸಮಿತಿಯನ್ನು ರಚಿಸಲಾಗುವುದು ಎಂದು ಹರಿಪ್ರಸಾದ್ ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article