ಹಾಸನಾಂಬೆ ದರ್ಶನಕ್ಕೆ ಸಕಲ ಸಿದ್ದತೆ ….!

0
50

ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕಲ್ಪಿಸುವ ಹಾಸನಾಂಬೆ ದರ್ಶನ ನೀಡುವ ಕಾಲ ಸನ್ನಿಹಿತವಾಗಿದೆ . ದೇವಾಲಯದ ಗರ್ಭಗುಡಿಯ ಬಾಗಿಲು ಅಕ್ಟೋಬರ್ 13ಕ್ಕೆ ತೆರೆಯಲಿದೆ. ಹೀಗಾಗಿ ಜಿಲ್ಲಾಡಳಿತ 15 ದಿನದ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಮಹಾಮಾರಿ ಕೊರೊನಾ ನಂತರ ಇದೀಗ ಅದ್ಧೂರಿಯಾಗಿ ಜಾತ್ರಾ ಮಹೋತ್ಸವವನ್ನು ಆಚರಣೆ ಮಾಡುವುದಕ್ಕೆ ಜಿಲ್ಲಾಡಳಿತ ತೀರ್ಮಾನ ಮಾಡಿದೆ .
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದ್ದು , ಆದ್ದರಿಂದ ಈಗಾಗಲೇ ಶಾಸಕರ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಿಎಂ ಸೇರಿದಂತೆ ರಾಜ್ಯದ ಎಲ್ಲಾ ಗಣ್ಯರನ್ನು ಆಹ್ವಾನಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ . ಈ ಬಗ್ಗೆ ಮಾತನಾಡಿದ ಸ್ಥಳೀಯ ಬಿಜೆಪಿ ಶಾಸಕ ಪ್ರೀತಂಗೌಡ, ಪ್ರತಿ ವರ್ಷದಂತೆ ಈ ಬಾರಿಯೂ 15 ದಿನಗಳ ಕಾಲ ದೇವಸ್ಥಾನದ ಗರ್ಭಗುಡಿಯ ಬಾಗಿಲು ತೆರೆಯಲಾಗುತ್ತದೆ. ಮೊದಲ ಮತ್ತು ಕೊನೆಯ ದಿನ ಹಾಗೂ ಆಕ್ಟೋಬರ್ 25ರ ಸೂರ್ಯ ಗ್ರಹಣದ ದಿನದಂದು ಭಕ್ತರಿಗೆ ಪ್ರವೇಶ ಇರುವುದಿಲ್ಲ. ಇನ್ನುಳಿದ 12 ದಿನ ಭಕ್ತರು ತಾಯಿಯ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

LEAVE A REPLY

Please enter your comment!
Please enter your name here