No menu items!
16.4 C
Munich
Sunday, July 19, 2026

ಚೆನ್ನಮ್ಮ ಅವರ ಅಂತಿಮ ಯಾತ್ರೆ

Must read

ಚೆನ್ನಮ್ಮ ಅವರ ಅಂತಿಮ ಯಾತ್ರೆ ಇಂದು: ಬೆಂಗಳೂರಿನಿಂದ ಹೊಳೆನರಸೀಪುರದವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತಿಮ ಯಾತ್ರೆ ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಆರಂಭವಾಗಲಿದೆ. ಮಾರ್ಗ ಮಧ್ಯೆ ಹಲವು ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಅಂತಿಮ ಯಾತ್ರೆ ಸಾಗುವ ಮಾರ್ಗಗಳು:
ನೆಲಮಂಗಲ ಕ್ರಾಸ್, ಸೋಲೂರು ಕ್ರಾಸ್, ಮರೂರು ಹ್ಯಾಂಡ್ ಪೋಸ್ಟ್, ಕುಣಿಗಲ್ ಕ್ರಾಸ್, ಬೆಳ್ಳೂರು ಕ್ರಾಸ್, ಕದಬಳ್ಳಿ ಕ್ರಾಸ್, ಹಿರಿಸಾವೆ ಕ್ರಾಸ್, ಚನ್ನರಾಯಪಟ್ಟಣ, ಎಲೆಯೂರು (ಉದಯಪುರ), ಶಾಂತಿಗ್ರಾಮ, ಬೂವನಹಳ್ಳಿ ಕ್ರಾಸ್, ಹಾಸನ ಡೈರಿ ಸರ್ಕಲ್, ಎನ್.ಆರ್. ಸರ್ಕಲ್ ಹಾಗೂ ಮೊಸಳೆ ಹೊಸಹಳ್ಳಿ ಮಾರ್ಗವಾಗಿ ಹೊಳೆನರಸೀಪುರ ತಲುಪಲಿದೆ.
ಹೊಳೆನರಸೀಪುರದಲ್ಲಿ ಅಂತಿಮ ದರ್ಶನ:
ಹೊಳೆನರಸೀಪುರ ತಲುಪಿದ ಬಳಿಕ ಎಚ್.ಡಿ. ರೇವಣ್ಣ ಅವರ ನಿವಾಸದಲ್ಲಿ ಇಂದು ರಾತ್ರಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜುಲೈ 20ರಂದು ಬೆಳಗ್ಗೆ 7ರಿಂದ 9.30ರವರೆಗೆ ಮತ್ತೊಮ್ಮೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ.
ನಾಳೆ ಅಂತ್ಯಕ್ರಿಯೆ:
ಜುಲೈ 20ರಂದು ಬೆಳಗ್ಗೆ 10 ಗಂಟೆಗೆ ಹೊಳೆನರಸೀಪುರದಿಂದ ಅಂತಿಮ ಯಾತ್ರೆ ಆರಂಭವಾಗಿ, 11.30ರ ಸುಮಾರಿಗೆ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲಿನ ಕ್ಯಾತನಹಳ್ಳಿಯಲ್ಲಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ.
ಅಂತಿಮ ವಿಧಿವಿಧಾನ:
ಮಧ್ಯಾಹ್ನ 2 ಗಂಟೆಯಿಂದ ಸಂಜೆ 4.15ರವರೆಗೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆಯಲಿದ್ದು, ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ.

- Advertisement -spot_img

More articles

- Advertisement -spot_img

Latest article