ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಹೈಕಮಾಂಡ್ ಗೆ ದಂಬಾಲು ಹೊಡಿತ್ತಿವೆ. ಈ ನಡುವೆ ಲಿಂಗಾಯತ ಸ್ವಾಮಿಗಳು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿದ್ದಾರೆ.
ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ತುಮಕೂರಿನ ಮತ್ತು ನೆಲಮಂಗಲ ಮಠದ ಸ್ವಾಮೀಜಿಗಳು ಆಗಮಿಸಿದ್ದಾರೆ. ಸ್ವಾಮೀಜಿಗಳು ತುಮಕೂರು ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಕೇಳಲು ಆಗಮಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ತುಮಕೂರು ಗ್ರಾಮಾಂತರ ಶಾಸಕ ಗೌರಿ ಶಂಕರ್ ಗೆ ಸಚಿವ ಸ್ಥಾನ ನೀಡುವಂತೆ ಸ್ವಾಮೀಜಿಗಳು ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಸಿದ್ದಲಿಂಗೇಶ್ವರ ಮಠದ ಶಿವ ಪಂಚಾಕ್ಷರಿ ಸ್ವಾಮೀಜಿ, ಪಿರಂಗೀಶ್ವರ ಮಠದ ಶಿವ ರುದ್ರ ಶಿವಾಚಾರ್ಯ ಸ್ವಾಮೀಜಿ, ರುದ್ರ ಮುನೇಶ್ವರ್ ಮಠದ ಚಂದ್ರ ಶೇಖರ ಸ್ವಾಮೀಜಿ, ಅಳ್ಳೂರು ಮಠದ ಚೆನ್ನಬಸವ ಸ್ವಾಮೀಜಿ ಹಾಗೂ ವನಕಲ್ಲು ಮಠದ ರಮಾನಂದ ಸ್ಬಾಮೀಜಿಗಳು ದೇವೇಗೌಡರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.






