No menu items!
20.7 C
Munich
Monday, September 14, 2026

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ!

Must read

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ!

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಶನಿವಾರ ನಿಧನರಾದರು. ತೀವ್ರ ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಆರೋಗ್ಯ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಐಸಿಯುನಲ್ಲಿ ತಜ್ಞ ವೈದ್ಯರ ತಂಡದ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.
ಚೆನ್ನಮ್ಮ ಅವರ ನಿಧನದಿಂದ ದೇವೇಗೌಡ ಕುಟುಂಬಕ್ಕೆ ಅಪಾರ ದುಃಖ ಉಂಟಾಗಿದ್ದು, ರಾಜಕೀಯ ವಲಯದಲ್ಲಿಯೂ ಶೋಕದ ವಾತಾವರಣ ನಿರ್ಮಾಣವಾಗಿದೆ.
ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚನ್ನಮ್ಮ ಅವರು 1954 ಮೇ 25ರಂದು ಹೆಚ್.ಡಿ. ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಹೆಚ್.ಡಿ. ರೇವಣ್ಣ, ಹೆಚ್.ಡಿ. ಬಾಲಕೃಷ್ಣ, ಹೆಚ್.ಡಿ. ರಮೇಶ್ ಗೌಡ, ಹೆಚ್.ಡಿ. ಕುಮಾರಸ್ವಾಮಿ, ಶೈಲಜಾ ಹಾಗೂ ಅನಸೂಯಾ ಸೇರಿ ಒಟ್ಟು ನಾಲ್ವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಚನ್ನಮ್ಮ ದೇವೇಗೌಡರ ರಾಜಕೀಯ ಜೀವನದ ಬೆನ್ನೆಲುಬಿನಂತಿದ್ದು, ಸದಾ ಕಾಲ ರಾಜಕೀಯದಲ್ಲಿ ಬ್ಯುಸಿಯಾಗಿದ್ದ ದೇವೇಗೌಡರಿಗೆ ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸುವ ಮೂಲಕ ಗಟ್ಟಿಗಿತ್ತಿ ಎನಿಸಿಕೊಂಡಿದ್ದರು. ಆರು ಮಕ್ಕಳನ್ನ ಸಲಹಿದ್ದಲ್ಲದೆ, ಅವರ ಶಿಕ್ಷಣದ ಜವಾಬ್ದಾರಿ ಹೊತ್ತು ಆದರ್ಶ ಗೃಹಿಣಿಯಾಗಿದ್ದರು. ಅವರ ಅಂತ್ಯಕ್ರಿಯೆ ಹಾಗೂ ಅಂತಿಮ ದರ್ಶನದ ಕುರಿತು ಕುಟುಂಬದವರು ಶೀಘ್ರದಲ್ಲೇ ಅಧಿಕೃತ ಮಾಹಿತಿ ನೀಡುವ ನಿರೀಕ್ಷೆಯಿದೆ.

- Advertisement -spot_img

More articles

- Advertisement -spot_img

Latest article