ಮುಂದಿನ ತಿಂಗಳಿಂದ ನಾನು ಪ್ರಚಾರಕ್ಕೆ ಹೋಗುತ್ತೇನೆ..!

admin
1 Min Read

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ತಿಂಗಳಿಂದ ನಾನು ಪ್ರಚಾರಕ್ಕೆ ಹೋಗುತ್ತೇನೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತ್ನಾಡಿದ ಅವರು,
ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚರತ್ನ ಯಾತ್ರೆ ನಡೆಯುತ್ತಿದೆ.

ಮುಂದಿನ ತಿಂಗಳಿಂದ ನಾನೂ ಪಾಲ್ಗೊಳ್ಳುತ್ತೇನೆ ಎಂದು ತಿಳಿಸಿದ್ರು. ಪ್ರತಿ ಹಳ್ಳಿಯಲ್ಲಿ ಎಲ್ಲರಿಗೂ ಒಂದೊಂದು ಜವಾಬ್ದಾರಿ ಕೊಟ್ಟಿದ್ದೇವೆ. ಪಕ್ಷದ ಮುಖಂಡರು, ಶಾಸಕರು, ಮಾಜಿ ಶಾಸಕರಿಗೆ ಜವಾಬ್ದಾರಿ ನೀಡಿದ್ದೇವೆ. ಮನೆ ಮನೆಗೆ ತೆರಳಿ ಪಕ್ಷದ ಪರವಾಗಿ ಪ್ರಚಾರ ಮಾಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ರು.

ಇನ್ನೂ ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಪ್ರಧಾನಿ H.D.ದೇವೇಗೌಡ ಅವರು ಇಂದು , ದಕ್ಷಿಣಕಾಶಿ ನಂಜನಗೂಡಿಗೆ ಭೇಟಿ ನೀಡಿದ್ರು. ಪತ್ನಿ ಚೆನ್ನಮ್ಮ ಸೇರಿ ಕುಟುಂಬ ಸಮೇತರಾಗಿ ದೇವೇಗೌಡ್ರು ಶ್ರೀಕಂಠೇಶ್ವರನ ದರ್ಶನ ಪಡೆದುಕೊಂಡ್ರು. ದೇವಸ್ಥಾನಕ್ಕೆ ಆಗಮಿಸಿದ ದೇವೇಗೌಡರನ್ನ ನಂಜನಗೂಡು ದೇವಸ್ಥಾನದ ಆಡಳಿತ ಮಂಡಳಿ ಸ್ವಾಗತ ಕೋರಿದ್ರು.

Share This Article
Leave a Comment