ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ದೆಹಲಿಗೆ ಹೋಗ್ತಿದ್ದಾರೆ. ಜೆಪಿ ನಗರದಲ್ಲಿನ ತಮ್ಮ ನಿವಾಸದಲ್ಲಿ ಮಾತಾಡಿದ ಎಚ್ ಡಿಕೆ, ‘ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಲಿದ್ದೇನೆ. ಇದೊಂದು ಸೌಜನ್ಯದ ಭೇಟಿ ಅಷ್ಟೇ. ನಮಗೆ ಕೇಂದ್ರ ಸರ್ಕಾರದಿಂದ ಸಹಕಾರ ನೀಡಲು ಮನವಿ ಮಾಡ್ತೀನಿ. ರಾಜ್ಯ ಮತ್ತು ಕೇಂದ್ರ ಸರ್ಕಾರ ಸಾಮರಸ್ಯವಾಗಿ ಪರಸ್ಪರ ವಿಶ್ವಾಸದಿಂದ ನಡೆದುಕೊಳ್ಳಬೇಕಿದೆ ಎಂದು ಹೇಳಿದರು.
ರಾಹುಲ್ ಗಾಂಧಿ ಅವರಿಂದ ಯಾವುದೇ ಬುಲಾವ್ ಬಂದಿಲ್ಲ. ರಾಹುಲ್ ಗಾಂಧಿ ಅವರು ಕರೆದರು,ಕುಮಾರಸ್ವಾಮಿ ಹೋಗಲಿಲ್ಲ ಅಂತ ಮತ್ತೆ ಅದಕ್ಕೊಂದು ರಾಜಕೀಯ ಬಣ್ಣ ಹಚ್ಚುತ್ತಾರೆ. ಯಾರೂ ಅಪಾರ್ಥ ಮಾಡಿಕೊಳ್ಳಬಾರದು , ರಾಹುಲ್ ಹಾಗೂ ಸೋನಿಯಾಗಾಂಧಿಯವರ ಜೊತೆ ನಿನ್ನೆ ದೂರವಾಣಿಯಲ್ಲಿ ಮಾತಾಡಿದ್ದೇನೆ ಎಂದು ತಿಳಿಸಿದರು.