ಶಾಲೆಗಳ ಕಟ್ಟಡವನ್ನು ದುರಸ್ಥಿ ಮಾಡಲು ಒಂದು ತಿಂಗಳ ಗಡವು

0
154

ಬೆಂಗಳೂರು : ರಾಜ್ಯದಲ್ಲಿ ಹಾಳಾಗಿರುವ ಶಾಲೆಗಳ ಕಟ್ಟಡವನ್ನು ದುರಸ್ಥಿ ಮಾಡಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಒಂದು ತಿಂಗಳು ಗಡುವು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ HDK, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮಾಳಿಗೆಗಳು ಸೋರುತ್ತಿವೆ.

 

ಗೋಡೆಗಳು ಬಣ್ಣಗೆಟ್ಟಿವೆ. ಕಿಟಕಿ, ಬಾಗಿಲು ಹಾಳಾಗಿವೆ. ಕುಡಿಯಲು ನೀರಿಲ್ಲ. ಮಕ್ಕಳಿಗೆ ಶೌಚಾಲಯವೂ ಇಲ್ಲ. ಮಕ್ಕಳ ಜೀವಕ್ಕೆ ಗ್ಯಾರಂಟಿ ಇಲ್ಲ ಎಂದು ಕಿಡಿಕಾರಿದ್ದಾರೆ. ಪಠ್ಯಕ್ಕೆ ಕೇಸರಿ ಬಳಿದು ಕತ್ತರಿ ಹಾಕುವ ಅಕ್ಷರದ್ರೋಹಿ ಬಿಜೆಪಿ ಸರಕಾರಕ್ಕೆ ಬಣ್ಣಗೆಟ್ಟ ಶಾಲೆಗಳ ಗೋಡೆಗಳೇ ಕಾಣುತ್ತಿಲ್ಲ ಎಂದು ಟೀಕಿಸಿದ್ದಾರೆ. ಪತ್ರಿಕೆಯೊಂದು ಬಿಜೆಪಿ ಸರ್ಕಾರದ ಗೋಮುಖವ್ಯಾಘ್ರ ಮುಖವನ್ನು ಬೆತ್ತಲುಗೊಳಿಸಿದೆ.

 

 

ಸೋರುತ್ತಿರುವ ಶಾಲೆಗಳನ್ನು ಮುಖಕ್ಕೆ ರಾಚುವಂತೆ ತೋರಿಸಿದೆ. ರಾಜ್ಯದಲ್ಲಿ 75,675 ಶಾಲೆ ಕೊಠಡಿಗಳು ಶಿಥಿಲವಾಗಿವೆ. ಇಲ್ಲಿ ಶಿಥಿಲ ಆಗಿರುವುದು ಕರ್ನಾಟಕದ ಹೆಮ್ಮೆ ಎಂದು ಅವರು ಕಿಡಿಕಾರಿದ್ದಾರೆ. ತಕ್ಷಣವೇ ಸರ್ಕಾರ ಕ್ರಮ ವಹಿಸಬೇಕು. ಅಧಿಕಾರಿಗಳನ್ನು ಶಾಲೆಗಳಿಗೆ ಅಟ್ಟಿ ರಿಪೇರಿ ಕೆಲಸ ಮಾಡಿಸಿ ಎಲ್ಲ ಮೂಲಸೌಕರ್ಯ ಒದಗಿಸಬೇಕು. ಒಂದು ಮಗುವಿಗೆ ಅಪಾಯವಾದರೂ ಸುಮ್ಮನಿರುವ ಪ್ರಶ್ನೆ ಇಲ್ಲ. ಒಂದು ತಿಂಗಳೊಳಗೆ ಶಾಲೆಗಳು ಸರಿ ಆಗದಿದ್ದರೆ, ಸದನದ ಒಳಗೆ, ಹೊರಗೆ ಶಿಕ್ಷಣ ಸಚಿವರು ಹೋರಾಟ ಎದುರಿಸಬೇಕಾಗುತ್ತದೆ ಎಂದು ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here