ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಗಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಪಿ ಭವನದಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಗೆ 130 ಸೀಟು ಬರುತ್ತದೆ ಎಂಬ ಆಂತರಿಕ ಸಮೀಕ್ಷೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ಲಾಂಟೆಡ್ ಸಮೀಕ್ಷೆ ನಡೆಸಲಾಗಿದೆ. ಅವರ ಶಕ್ತಿ ಇರುವುದು 60 ರಿಂದ 65 ಸೀಟು ಅಷ್ಟೇ. 2013 ರಲ್ಲಿ ಯಡಿಯೂರಪ್ಪನವರು ಇನ್ನೊಂದು ಪಕ್ಷ ಮಾಡದಿದ್ದರೆ ಸಿದ್ದರಾಮಯ್ಯ ಅಂದು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಅವರು ಯಡಿಯೂರಪ್ಪನವರನ್ನು ನೆನಪಿಸಿಕೊಳ್ಳಬೇಕು. ಅಂದು ಅಧಿಕಾರದಲ್ಲಿದ್ದ ಪಕ್ಷ ನಂತರ 78 ಕ್ಕೆ ಇಳಿದಿದ್ದಾರೆ. ಇವತ್ತು ಹೇಳುತ್ತಿದ್ಧೇನೆ ಬರೆದಿಟ್ಡುಕೊಳ್ಳಿ, ಕಾಂಗ್ರೆಸ್ ಪಕ್ಷ 70 ಸೀಟು ದಾಟಲ್ಲ. ನಮ್ಮ ಪಕ್ಷಕ್ಕೆ ಜನತೆಯ ಮತ್ತು ದೇವರ ಆಶೀರ್ವಾದ ಇದೆ. ನಾನು ಚಾಲೆಂಜ್ ಮಾಡುತ್ತೇನೆ. ನಮ್ಮ ಪಕ್ಷ ಈ ಎರಡು ರಾಷ್ಟ್ರಿಯ ಪಕ್ಷಗಳಿಗಿಂತ ಮೇಲಿರುತ್ತದೆಯೇ ಹೊರತು ಕೆಳಗಿರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.