ಬಜೆಟ್ 2018-19 : ಯಾವುದು ಏರಿಕೆ? ಯಾವುದು ಇಳಿಕೆ?

Date:

ಕಾಂಗ್ರೆಸ್ -ಜೆಡಿಎಸ್ ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್ ಅನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿಯವರು ಮಂಡಿಸಿದ್ದಾರೆ.
ಈ ಬಾರಿಯ ಬಜೆಟ್ ನಲ್ಲಿ ಯಾವುದು ಏರಿಕೆಯಾಗಿದೆ? ಯಾವುದು ಇಳಿಕೆಯಾಗಿದೆ ಎಂಬುದರ ಡೀಟೈಲ್ಸ್ ಇಲ್ಲಿದೆ.

ಯಾವುದು ಏರಿಕೆ?

*ಮದ್ಯದ ಮೇಲಿನ ಅಬಕಾರಿ ಸುಂಕ ಶೇ. 4ರಷ್ಟು ಹೆಚ್ಚಳ.

* ಅಬಕಾರಿ ಸುಂಕ 17 ಸ್ಲ್ಯಾಬ್ ಗಳಿಗೆ ಶೇ 15 ರಿಂದ ಶೇ 34ಕ್ಕೆ ಏರಿಕೆ.

* ಮದ್ಯ, ತಂಬಾಕು ಉತ್ಪನ್ನಗಳು , ಸಿಗರೇಟ್, ಬೀಡಿ ಬೆಲೆ ಏರಿಕೆ.

* ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಶೇ. 30ರಿಂದ 32ಕ್ಕೆ ಏರಿಕೆ. ಪೆಟ್ರೋಲ್ ಬೆಲೆ 1.14 ರೂ ಏರಿಕೆ.

* ಡೀಸೆಲ್ ಮೇಲಿನ 19 ರಿಂದ 22ರಷ್ಟು ಸೆಸ್ ಏರಿಕೆ. ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 1.12 ರೂ ಏರಿಕೆ.

* ಖಾಸಗಿ ಸೇವಾ ವಾಹನ ತೆರಿಗೆ ಪ್ರತಿ ಚದರ ಮೀಗೆ ಶೇ. 50 ರಷ್ಟು ಹೆಚ್ಚಳ.

*ವಿದ್ಯುತ್ ದರ ಪ್ರತಿ ಯೂನಿಟ್ ಮೇಲೆ 10 ರಿಂದ 20ಪೈಸೆ ಏರಿಕೆ.

* ವಿದ್ಯುತ್ ಮೇಲಿನ ತೆರಿಗೆ ಶೇ 6 ರಿಂದ ಶೇ 9ಕ್ಕೆ ಏರಿಕೆ.

ಯಾವುದು ಇಳಿಕೆ?

* ಸಿರಿಧಾನ್ಯಗಳಾದ ನವಣೆ, ಸಾಮೆ, ಅರಕ ಹಾಗೂ ಬರಗು ಮೇಲಿನ ಹಿಟ್ಟುಗಳಿಗೆ ತೆರಿಗೆ ವಿನಾಯ್ತಿ.

* ದ್ವಿದಳ ಧಾನ್ಯ, ತೆಂಗಿನ ಕಾಯಿ ಸಿಪ್ಪೆಯ ಮೇಲಿನ ತೆರಿಗೆ ವಿನಾಯಿತಿ ಮುಂದುವರಿಕೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...