ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಅವರು ಹಾಗೂ 9ನೇ ಉಪಮುಖ್ಯಮಂತ್ರಿಯಾಗಿ ಡಾ. ಜಿ ಪರಮೇಶ್ವರ್ ಇಂದು ಪ್ರಮಾಣವಚನ ಸ್ವೀಕರಿಸಿದರು.
ಕಳೆದ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಯಾಗಿ ಸೇವೆ ಸಲ್ಲಿಸುವ ಕನಸನ್ನು ಡಾ. ಜಿ ಪರಮೇಶ್ವರ್ ಹೊತ್ತಿದ್ದರು. ಆದರೆ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಪರಮೇಶ್ವರ್ ಕನಸು ನನಸಾಗಿರಲಿಲ್ಲ. ಇದೀಗ ಸಮ್ಮಿಶ್ರ ಸರ್ಕಾರದಲ್ಲಿ ಕನಸು ನನಸಾದಂತಾಗಿದೆ.
ಕುಮಾರಸ್ವಾಮಿ ಮತ್ತು ಪರಮೇಶ್ವರ್ ಅವರು ದೇವರು ಮತ್ತು ಕರ್ನಾಟಕದ ಜನತೆಯ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.