No menu items!
4.9 C
Munich
Saturday, May 2, 2026

ಎಚ್ ಡಿ ಕೆ ಪೂರ್ಣಾವಧಿ ಸರ್ಕಾರ ಮಾಡಲಿ ಎಂದು ಹಾರೈಸಿದ ಪೇಜಾವರ ಶ್ರೀ

Must read

ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಅವರು ಒಬ್ಬ ಅನುಭವಿ ರಾಜಕಾರಣಿ. ಅವರು ತಮ್ಮ ನೇತೃತ್ವದಲ್ಲಿ ಪೂರ್ಣಾವಧಿ ಸರ್ಕಾರ ರಚಿಸಲಿ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹಾರೈಸಿದ್ದಾರೆ.

ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ವದ ವಿಕೃತಿಯಾಗಿವೆ. ರೆಸಾರ್ಟ್, ಆಪರೇಷನ್ ಗಳಲ್ಲಿ ಜನಪ್ರತಿನಿಧಿಗಳು ತಲ್ಲೀನರಾಗಿದ್ದಾರೆ. ಯಾವುದೇ ರಾಜಕೀಯ ಪಕ್ಷಗಳು ನೈತಿಕತೆ ಹೊಂದಿಲ್ಲ ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ರು.
ರಾಜ್ಯದಲ್ಲಿ ಗೊಂದಲದ ರಾಜಕೀಯ ಪರಿಸ್ಥಿತಿ ನಿರ್ಮಾಣವಾದರೆ ರಾಷ್ಟ್ರಪತಿ ಆಡಳಿತದ ಬದಲು ಸರ್ವ ಪಕ್ಷ ಸರ್ಕಾರ ಜಾರಿಗೆ ಬರಬೇಕು. ಅಂತಹ ಪ್ರಯೋಗ ರಾಜ್ಯದಲ್ಲಿ ನಡೆಯಬೇಕಿದ್ದು, ಸರ್ವಪಕ್ಷದ ಆದರ್ಶ ಮಂತ್ರಿ ಮಂಡಲ ರಚನೆಯಾಗಬೇಕು. ವಿಪಕ್ಷ ಮುಕ್ತ ಸರ್ಕಾರ ಸರಿಯಲ್ಲ. ಆದರೆ ವಿಪಕ್ಷ ಇರಬೇಕು ಎನ್ನುವುದು ನನ್ನ ವಾದ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಪೂರ್ಣ ತೃಪ್ತಿ ತಂದಿಲ್ಲ. ಮೋದಿ ಅವರಿಂದ ಸಾಕಷ್ಟು ಕೆಲಸಗಳಾಗಿವೆ. ಆದರೆ ನಿರೀಕ್ಷೆಯಷ್ಟು ಸಾಧನೆ ಹಾಗೂ ಬದಲಾವಣೆಗಳಾಗಿಲ್ಲ ಎನ್ನುವ ಬೇಸರವಿದೆ. ರಾಮ ಮಂದಿರಕ್ಕಿಂತ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು, ಗಂಗಾ ನದಿ ಶುದ್ಧೀಕರಣ, ವಿದೇಶದಲ್ಲಿರು ಕಪ್ಪು ಹಣ ದೇಶಕ್ಕೆ ಮರಳಿ ತರುವುದು ಸೇರಿದಂತೆ ಅನೇಕ ಆಶ್ವಾಸನೆಗಳು ಪೂರ್ಣವಾಗಿಲ್ಲ ಎಂದು ಶ್ರೀಗಳು ಸುದ್ದಿಗೋಷ್ಠಿಯಲ್ಲಿ ಹೇಳಿದ್ರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article