ಕಾಲ ಹೇಗಿದೆ ಅಂದರೆ ಆರೋಪ ಬಂದ ಕೂಡಲೆ ಅಪರಾಧಿ ಮಾಡುತ್ತಾರೆ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಕಾಲ ಹೇಗಿದೆ ಅಂದರೆ ಆರೋಪ ಬಂದ ಕೂಡಲೆ ಅಪರಾಧಿ ಮಾಡುತ್ತಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಕೇತಗಾನಹಳ್ಳಿ ಜಮೀನು ಒತ್ತುವರಿ ತೆರವು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಲ ಹೇಗಿದೆ ಅಂದರೆ ಆರೋಪ ಬಂದ ಕೂಡಲೆ ಅಪರಾಧಿ ಮಾಡುತ್ತಾರೆ.
ರೀಲ್ಸ್, ಶಾರ್ಟ್ಸ್ ಕಾಲ ಇದು. ಅಂತಿಮವಾಗಿ ಕುಮಾರಸ್ವಾಮಿ ಅವರ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತರಬೇಕು, ಮಸಿ ಬಳಿಯಬೇಕು ಅಷ್ಟೇ ತಾನೆ ಅಂತಿಮ. ಇದರ ಹಿಂದೆ ಯರ‍್ಯಾರು ಇದ್ದಾರೆ ಎಂದು ಈಗ ಚರ್ಚೆ ಮಾಡಲ್ಲ. ಎಲ್ಲಾ ದಾಖಲಾತಿ ತೆಗೆಸಿದ್ದೇನೆ. ಸಂಪೂರ್ಣ ಮಾಹಿತಿ ಕೊಡುತ್ತೇನೆ ಎಂದು ತಿಳಿಸಿದರು.
ಸರ್ವೆ ನಂಬರ್ 7 ರಲ್ಲಿ 1 ಎಕರೆ ನಾವು ಅನುಭವದಲ್ಲಿ ಇದ್ದೇವೆ. ಉಳಿದ 4 ಎಕರೆ ಪೋಡಿ ದುರಸ್ತಿ ಮಾಡಬೇಕು. ಅದನ್ನ ಸರ್ಕಾರ ಮಾಡಬೇಕು. ರೈತರ ಜಮೀನು ಖರೀದಿ ಮಾಡಿದಾಗ ರೈತರು ಹಾಕಿದ್ದ ಬೌಂಡರಿಯನ್ನ ನಾವು ಹಾಗೇ ಉಳಿಸಿಕೊಂಡಿದ್ದೇವೆ. ಅರ್ಧ ಇಂಚು ಬೇರೆಯದಕ್ಕೆ ಬೇಲಿ ಹಾಕಿಲ್ಲ. ಸಿಎಂ ಆದಾಗ ಎಷ್ಟೋ ಜನರಿಗೆ ಸಾಗುವಳಿ ಚೀಟಿಯನ್ನ ಕೊಡಿಸಿದ್ದಾರೆ ಎಂದರು.