ಹೊಸ ಸಮವಸ್ತ್ರಕ್ಕೆ ಅಳತೆ ತೆಗೆದುಕೊಳ್ಳಬೇಕು ಎಂದು ಮುಖ್ಯೋಪಾಧ್ಯಾಯ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಜಬಲ್ ಪುರ್ ಕತ್ರಿ ಬಂಜರ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. 6 ನೇ ತರಗತಿ ವಿದ್ಯಾರ್ಥಿನಿ ಶಿಕ್ಷಕನಿಂದ ಕಿರುಕುಳ ಅನುಭವಿಸಿದವಳು. ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದ್ದು , ವಿದ್ಯಾರ್ಥಿನಿಯ ಸಹಪಾಠಿಗಳು ಇದನ್ನು ಧೃಢಪಡಿಸಿದ್ದಾರೆ.