ಮೊಳಕೆ ಭರಿಸಿರುವ ಕಾಳುಗಳು ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪ್ರತಿಯೊಬ್ಬರಿಗೂ ತಿಳಿದಿದೆ. ಹೆಸರುಬೇಳೆಯನ್ನು ಮೊಳಕೆ ಭರಿಸಿ ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಳ್ಳಿ.
ಇದರಲ್ಲಿ ಕ್ಯಾಲರಿ ಕಡಿಮೆ ಇದ್ದು, ನಾರಿನಾಂಶ ಮತ್ತು ವಿಟಮಿನ್ ಬಿ ಇದೆ. ಇಷ್ಟು ಮಾತ್ರವಲ್ಲದೆ ವಿಟಮಿನ್ ಸಿ ಹಾಗೂ ಕೆ ಇದೆ.
ವಿಟಮಿನ್ ಕೆ ಯು ರಕ್ತ ಹೆಪ್ಪುಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಇದು ಮೂಳೆಯ ಖನಿಜಾಂಶವನ್ನು ನಿಯಂತ್ರಿಸುವುದು ಮತ್ತು ಮೂಳೆ ಸಾಂದ್ರತೆಯನ್ನು ಕಾಪಾಡುವುದು. ಮೊಳೆಕೆಯುಕ್ತ ಹೆಸರುಬೇಳೆಯಲ್ಲಿ ವಿಟಮಿನ್ ಕೆ ಸಮೃದ್ಧವಾಗಿದ್ದು, ಒಂದು ಕಪ್ ನಲ್ಲಿ 34 ಮಿ.ಗ್ರಾಂ.ಇದೆ. ಆರೋಗ್ಯಕರ ದೇಹಕ್ಕೆ ಬೇಕಾಗಿರುವ ದೈನಂದಿನ ಅಗತ್ಯತೆಯ ವಿಟಮಿನ್ ಕೆ ಯನ್ನು ಇದು ಒದಗಿಸುವುದು.
ಮೊಳಕೆಯುಕ್ತ ಹೆಸರುಬೇಳೆಯಲ್ಲಿ ವಿಟಮಿನ್ ಸಿ ಅಧಿಕವಾಗಿದೆ. ಇದು ದೇಹದಲ್ಲಿ ಪ್ರತಿರೋಧಕ ವ್ಯವಸ್ಥೆಯನ್ನು ಬಲಪಡಿಸಿ, ಸೋಂಕು ಹಾಗೂ ಕಾಯಿಲೆಗ ವಿರುದ್ಧ ಹೋರಾಡುವುದು. ಒಂದು ಕಪ್ ಮೊಳಕೆ ಭರಿಸಿದ ಹೆಸರುಬೇಳೆಯಲ್ಲಿ 14 ಮಿ.ಗ್ರಾಂ. ವಿಟಮಿನ್ ಸಿ ಇದೆ. ಆರೋಗ್ಯ ತಜ್ಞರ ಪ್ರಕಾರ ಪ್ರತಿನಿತ್ಯ ಪುರುಷರು 90 ಮಿ.ಗ್ರಾಂ.ನಷ್ಟು ವಿಟಮಿನ್ ಸಿಯನ್ನು ಸೇವಿಸಬೇಕು. ಇದೇ ವೇಳೆ ಮಹಿಳೆಯರು 75 ಮಿ.ಗ್ರಾಂ.ನಷ್ಟು ಸೇವನೆ ಮಾಡಬೇಕು. ವಿಟಮಿನ್ ಸಿಯಲ್ಲಿ ಇರುವಂತಹ ಆ್ಯಂಟಿಆಕ್ಸಿಡೆಂಟ್ ಅಂಶವು ಫ್ರೀ ರ್ಯಾಡಿಕಲ್ ನಿಂದ ರಕ್ಷಿಸುವುದು. ಫ್ರೀ ರ್ಯಾಡಿಕಲ್ ನ್ನು ಆ್ಯಂಟಿಆಕ್ಸಿಡೆಂಟ್ ಗಳು ತಟಸ್ಥಗೊಳಿಸದೆ ಇದ್ದರೆ ಆಗ ಅದು ಆರೋಗ್ಯಕರ ಕೋಶಗಳ ಮೇಲೆ ದಾಳಿ ಮಾಡುವುದು. ಇದು ಹಾನಿ ಹಾಗೂ ಉರಿಯೂತ ಉಂಟು ಮಾಡಿ ರೋಗಗಳಿಗೆ ಕಾರಣವಾಗುವುದು. ವಿಟಮಿನ್ ಸಿಯಲ್ಲಿ ಕಾಲಜನ್ ಕೂಡ ಇದ್ದು, ಇದು ಚರ್ಮ, ಅಂಗಾಂಗವನ್ನು ಬಲಗೊಳಿಸುವುದು.