ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕರ್ನಾಟಕ ಹೈಕೋರ್ಟ್‌ನ ನೂತನ ಐವರು ಹೆಚ್ಚುವರಿ ನ್ಯಾಯಾಧೀಶರಿಗೆ ಮಂಗಳವಾರ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಬೋಧಿಸಿದರು. ನ್ಯಾ. ಅನಿಲ್ ಭೀಮಸೇನ ಕಟ್ಟಿ, ನ್ಯಾ. ಗುರುಸಿದ್ದಯ್ಯ ಬಸವರಾಜ, ನ್ಯಾ. ಚಂದ್ರಶೇಖರ ಮೃತ್ಯುಂಜಯ ಜೋಶಿ, ನ್ಯಾ. ಉಮೇಶ್ ಮಂಜುನಾಥ್ ಭಟ್ ಅಡಿಗ ಮತ್ತು ನ್ಯಾ. ತಲಕಾಡ್ ಗಿರಿಗೌಡ ಶಿವಶಂಕರೇಗೌಡ ಅವರು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ನ್ಯಾಯಾಧೀಶರಾದ ಅಲೋಕ್ ಆರಾಧೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ, ಸಚಿವರಾದ ಡಾ.ಕೆ.ಸುಧಾಕರ್, ನಾಗೇಶ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಸಿ.ಟಿ ರವಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಬಿಜೆಪಿ ಮುಖಂಡರಾದ ಜಗದೀಶ್ ಶೆಟ್ಟರ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.