ಹಿಮಪಾತ ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಮೃತದೇಹ ಬೆಂಗಳೂರಿಗೆ

Date:

ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಮೃತಪಟ್ಟ ಇಬ್ಬರು ಕನ್ನಡಿಗರ ಮೃತದೇಹ ಇಂದು ಬೆಂಗಳೂರು ತಲುಪಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಮೃತಪಟ್ಟ ವಿಕ್ರಮ್. ರಕ್ಷಿತ್ ಮೃತದೇಹವನ್ನು ವಿಶೇಷ ವಿಮಾನದ ಮೂಲಕ ಇಂದು ಬೆಂಗಳೂರಿಗೆ ತರಲಾಗುತ್ತಿದೆ. ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನೂ ಉತ್ತರಾಖಂಡದ ಗಡಿ ಜಿಲ್ಲೆ ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಬೆಂಗಳೂರು ಮೂಲದ ವಿಕ್ರಮ್. ರಶ್ಮಿತ್ ಎಂಬ ಯುವಕರ ಶವ ಪತ್ತೆಯಾಗಿದ್ದು, ಅಕ್ಟೋಬರ್ 8 ರಂದು ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಶವ ಹೊರಕ್ಕೆ ತೆಗೆಯಲಾಗಿದೆ. ಕಳೆದ ಮಂಗಳವಾರ ಹಿಮಪಾತ ಸಂಭವಿಸಿದ ಬಳಿಕ ಯುವಕರು ನಾಪತ್ತೆಯಾಗಿದ್ದರು. ರಕ್ಷಣಾ ಕಾರ್ಯಚರಣೆ ವೇಳೆ ಮೃತ ದೇಹಗಳು ಪತ್ತೆಯಾಗಿವೆ. ಉತ್ತರಕಾಶಿ ಹಿಮಪಾತದಲ್ಲಿ ಒಟ್ಟು 29 ಮಂದಿ ಮೃತಪಟ್ಟಿದ್ದು, ವಿಪತ್ತು ನಿರ್ವಹಣಾ ತಂಡಗಳು ಸ್ಥಳದಲ್ಲಿ ನಿರಂತರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ?

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ? ಹಿಂದೂ ಧರ್ಮದಲ್ಲಿ...