ಗಣೇಶ ಹಬ್ಬಕ್ಕೆ ‘ಹಿರಣ್ಯ’ ಸಿನಿಮಾದ ನಯಾ ಪೋಸ್ಟರ್ ರಿಲೀಸ್…

Date:

ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಪಕರಾದ ವಿಘ್ನೇಶ್ವರ್ ಯು ಮತ್ತು ವಿಜಯ್ ಗೌಡ ಬಿದರಹಳ್ಳಿ ನಿರ್ಮಾಣ ಮಾಡುತ್ತಿರುವ ಹಿರಣ್ಯ ಸಿನಿಮಾದ ಹೊಸ ಪೋಸ್ಟರ್ ಗಣೇಶ್ ಚತುರ್ಥಿಗೆ ಬಿಡುಗಡೆಯಾಗಿದೆ. ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಾಯಕನಾಗಿ ಮಾಸ್ ಅವತಾರದಲ್ಲಿ ಖಡಕ್ಕಾಗಿ , ಬಾಯಲ್ಲಿ ಸಿಗರೇಟ್ ಹಿಡಿದು, ಪಕ್ಕ ರಾ ಲುಕ್ ನಲ್ಲಿ ಮಿಂಚಿದ್ದಾರೆ.


ಬಿಚ್ಚುಗತ್ತಿ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ರಾಜವರ್ಧನ್ ಮೊದಲ ಹೆಜ್ಜೆಯಲ್ಲಿಯೇ ಗೆಲುವು ತಮ್ಮದಾಗಿಸಿಕೊಂಡಿದ್ದರು. ಸದ್ಯ ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್ ಬ್ಯುಸಿಯಾಗಿದ್ದು, ಈ ಚಿತ್ರಕ್ಕೆ ಪ್ರವೀಣ್ ಅವ್ಯುಕ್ತ್ ಆಕ್ಷನ್ ಕಟ್ ಹೇಳಿದ್ದಾರೆ. ರಾಜವರ್ಧನ್ ಗೆ ಜೋಡಿಯಾಗಿ ಮಾಡೆಲ್ ರಿಹಾನಾ ನಟಿಸಿದ್ದಾರೆ .

ಸದ್ಯ ಹಿರಣ್ಯ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಚಿತ್ರಕ್ಕೆ ಯೋಗೇಶ್ವರನ್‌ ಆರ್‌ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಇನ್ನೂ ಸ್ಪೆಷಲ್ ರೋಲ್ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ನಟಿಸುತ್ತಿದ್ದಾರೆ. ಅಂದ ಹಾಗೇ ಹಿರಣ್ಯ ಸಿನಿಮಾದ ಟೈಟಲ್ ಡಾಲಿ ಧನಂಜಯ್ ಬಳಿ ಇತ್ತು. ಪ್ರೀತಿಯಿಂದ ಡಾಲಿ ಗೆಳೆಯ ರಾಜವರ್ಧನ್ ಗೆ ಬಿಟ್ಟು ಕೊಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...