ಭಾರತದ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರನ್ನು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಜರ್ಮನ್ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಗೆ ಹೋಲಿಸಿದ್ದಾರೆ. 1975 ಜೂನ್ 25 ರ ತುರ್ತುಪರಿಸ್ಥಿತಿಯ ಕರಾಳ ದಿನಗಳ ಕುರಿತು ಫೇಸ್ ಬುಕ್ ಮುಖಪುಟದಲ್ಲಿ ಬರೆಯುತ್ತಿರುವ ಜೇಟ್ಲಿ ಇಂದಿರಾಗಾಂಧಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದಾರೆ.
ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವವನ್ನು ಸಾಂವಿಧಾನಿಕ ಸರ್ವಾಧಿಕಾರವಾಗಿ ಪರಿವರ್ತಿಸಿದ್ದರು.ತುರ್ತು ಪರಿಸ್ಥಿತಿ ಹೇರುವ ಮುನ್ನ ಪ್ರತಿಪಕ್ಷಗಳು ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ಸಂಚು ರೂಪಿಸಿವೆ ಎಂದು ಆರೋಪಿಸಿ, ತುರ್ತುಪರಿಸ್ಥಿತಿ ಹೇರಿದ್ದು, ಹಿಟ್ಲರ್ ಧೋರಣೆ ಅನುಕರಣೆ ಆಗಿತ್ತು ಎಂದು ಜೇಟ್ಲಿ ಬರೆದುಕೊಂಡಿದ್ದಾರೆ.