No menu items!
7.9 C
Munich
Wednesday, September 23, 2026

ನಿಷೇಧಿತ ಹುಕ್ಕಾ ಬಾರ್ ನಡೆಸುತ್ತಿದ್ದ ಇಬ್ಬರ ಬಂಧನ

Must read

ನಿಷೇಧಿತ ಹುಕ್ಕಾ ಬಾರ್ ನಡೆಸುತ್ತಿದ್ದ ಇಬ್ಬರ ಬಂಧನ


ಬೆಂಗಳೂರು: ನಿಷೇಧಿತ ಹುಕ್ಕಾ ಬಾರ್ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಕುಂಬಳಗೋಡು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಜಿತ್ ನಾಯಕ್ ಹಾಗೂ ವರುಣ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಮನೆವೊಂದನ್ನು ಬಾಡಿಗೆಗೆ ಪಡೆದು ಅಕ್ರಮವಾಗಿ ಹುಕ್ಕಾ ಬಾರ್ ನಡೆಸುತ್ತಿದ್ದರು ಎನ್ನಲಾಗಿದೆ. ಭಾಗ್ಯಮ್ಮ ಎಂಬುವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದುಕೊಂಡು ಹುಕ್ಕಾ ಬಾರ್ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕುಂಬಳಗೋಡು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಹುಕ್ಕಾ ಸೇವನೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಕುಂಬಳಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -spot_img

More articles

- Advertisement -spot_img

Latest article