ಜೆಡಿಎಸ್ ಬಿಜೆಪಿ ಬಳಿಕ ಮತ್ತೆ ಕಾಂಗ್ರೆಸ್ ಗೂಡಿಗೆ ಹಳ್ಳಿಹಕ್ಕಿ MLC ಹೆಚ್.ವಿಶ್ವನಾಥ್ ಮುಖ ಮಾಡಿದ್ದಾರೆ. ದೆಹಲಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರನ್ನು ಭೇಟಿ ಮಾಡಿ H.ವಿಶ್ವನಾಥ್ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ಗೆ ಹೆಚ್.ವಿಶ್ವನಾಥ್ರನ್ನ ಸೇರಿಸಿಕೊಳ್ಳಲು ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ಮುನಿಸಿಕೊಂಡು ಕಾಂಗ್ರೆಸ್ಗೆ ಗುಡ್ ಬೈ ಹೇಳಿ JDS ಸೇರ್ಪಡೆಗೊಂಡಿದ್ರು. HDK ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಗೊಳಿಸುವಲ್ಲಿ ವಿಶ್ವನಾಥ್ ಪ್ರಮುಖ ಪಾತ್ರ ವಹಿಸಿದ್ದು, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣವಾಗಿದ್ರು, ಇನ್ನ ಉಪಚುನಾವಣೆ ಸೋತ ಬಳಿಕ ಸ್ವಪಕ್ಷ BJP ವಿರುದ್ಧವೇ ಹೆಚ್.ವಿಶ್ವನಾಥ್ ಬಹಿರಂಗವಾಗಿ ಅಸಮಾಧಾನವನ್ನು ವ್ಯಕ್ತಪಡಿಸುತ್ತಾ ಬಂದಿದ್ರು.
ಇದೀಗ ಹೆಚ್.ವಿಶ್ವನಾಥ್ ಬಿಜೆಪಿ ಬಿಟ್ಟು ಮತ್ತೆ ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗುತ್ತಿದ್ದು, ಅವರ ಮುಂದಿನ ರಾಜಕೀಯ ನಡೆ ತೀವ್ರ ಕುತೂಹಲ ಕೆರಳಿಸಿದೆ.