ಮುಂಬೈ: ಇಂಗ್ಲೆಂಡ್‍ನಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತ ತಂಡವನ್ನು ಆಯ್ಕೆ ಮಾಡಿದೆ. ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರು ಸ್ಥಾನ ಪಡೆದುಕೊಂಡಿದ್ದಾರೆ.
ಭಾರತ ಹಾಗೂ ನ್ಯೂಜಿಲ್ಯಾಂಡ್ ತಂಡಗಳ ನಡುವಿನ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ (ಡಬ್ಲ್ಯುಟಿಸಿ) ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಬಿಸಿಸಿಐ 20 ಸದಸ್ಯರ ತಂಡವನ್ನು ಪ್ರಕಟಿಸಿದೆ. ಜೂನ್ 18 ರಿಂದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಡಬ್ಲ್ಯುಟಿಸಿ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. ಭಾರತ ಟೆಸ್ಟ್ ತಂಡದಲ್ಲಿ ಕರ್ನಾಟಕದ ಕೆ.ಎಲ್ ರಾಹುಲ್, ಮಯಾಂಕ್ ಅಗರ್‍ವಾಲ್ ಮತ್ತು ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆದುಕೊಂಡಿದ್ದಾರೆ.
ಇಂಗ್ಲೆಂಡ್‍ನ ಸೌತಾಂಪ್ಟನ್‍ನಲ್ಲಿ ನಡೆಯಲಿರುವ ಪಂದ್ಯಾಟಕ್ಕಾಗಿ ಬಿಸಿಸಿಐ ಒಟ್ಟು 20 ಸದಸ್ಯರ ತಂಡವನ್ನು ಆಯ್ಕೆ ಮಾಡಿದೆ. 4 ಆಟಗಾರರನ್ನು ಮೀಸಲು ಆಟಗಾರರನ್ನಾಗಿ ಇರಿಸಲಾಗಿದೆ. ಯಾವುದೇ ಹೊಸ ಮುಖಗಳು ತಂಡದಲ್ಲಿ ಕಾಣಿಸಿಕೊಂಡಿಲ್ಲ. ಹಿರಿಯ ಅಟಗಾರರಾದ ಹಾರ್ದಿಕ್ ಪಾಂಡ್ಯ ಮತ್ತು ಭುವನೇಶ್ವರ್ ಕುಮಾರ್ ಅವರಿಗೆ ತಂಡದಿಂದ ಕೊಕ್ ನೀಡಲಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ನ ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧದ 5ಪಂದ್ಯಗಳ ಟೆಸ್ಟ್ ಸರಣಿಗೆ ಇದೇ ತಂಡವನ್ನು ಅಂತಿಮಗೊಳಿಸಲಾಗಿದ್ದು, ಜೂನ್ 18 ರಿಂದ 22 ರವರೆಗೆ ನಡೆಯಲಿರುವ ಟೆಸ್ಟ್ ಚಾಂಪಿಯನ್‍ಶಿಪ್ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿ ಆಡಳಿದೆ.
ಭಾರತ ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಅಜಿಂಕ್ಯ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಶುಭಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಹನುಮಾ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರಿತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಮಹಮದ್ ಸಿರಾಜ್, ಶಾರ್ದುಲ್ ಠಾಕೂರ್, ಉಮೇಶ್ ಯಾದವ್, ಕೆ.ಎಲ್.ರಾಹುಲ್ (ಫಿಟ್‍ನೆಸ್ ಕ್ಲಿಯರೆನ್ಸ್ ಬಳಿಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್- ಫಿಟ್‍ನೆಸ್ ಕ್ಲಿಯರೆನ್ಸ್ ಬಳಿಕ).
ಮೀಸಲು ಆಟಗಾರರು: ಅಭಿಮಾನ್ಯ ಈಶ್ವರನ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಅರ್‍ಝನ್ ನಾಗಸ್‍ವಾಲ