ಐಸಿಸಿ ಹೊರಡಿಸಿರುವ ಪ್ರಸಕ್ತ ವರ್ಷದ ಐಸಿಸಿ ಏಕದಿನ ರ್ಯಾಂಕಿಂಗ್‍ನಲ್ಲಿ ಭಾರಿ ಕುಸಿತ ಕಂಡಿರುವ ಭಾರತ ಎರಡನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡಿದೆ ಕಳೆದ ಹಾಗೂ ಪ್ರಸಕ್ತ ವರ್ಷದಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ ಪಂದ್ಯದಲ್ಲಿ ಅಮೋಘ ಆಟ ಪ್ರದರ್ಶನ ಮಾಡಿದ ಹೊರತಾಗಿಯೂ ಟೀಂ ಇಂಡಿಯಾ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಇನ್ನು ಏಕದಿನ ಪಂದ್ಯದಲ್ಲಿ ಉತ್ತಮ ಆಟ ಪ್ರದರ್ಶನ ನೀಡುತ್ತಾ ಬಂದಿರುವ ಆಸ್ಟ್ರೇಲಿಯಾ ಮತ್ತೆ ಏಕದಿನ ರ್ಯಾಂಕಿಂಗ್‍ನಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದೆ. ನ್ಯೂಜಿಲೆಂಡ್ ವಿರುದ್ದ ನಡೆದ ಚಾಪೆಲ್-ಹ್ಯಾಡ್ಲಿ ಸರಣಿಯನ್ನು ವಶ ಪಡಿಸಿಕೊಳ್ಳುವ ಮೂಲಕ ಪ್ರಸಕ್ತ ವರ್ಷದ ಏಕದಿನ ರ್ಯಾಂಕಿಂಗ್‍ನಲ್ಲಿ ಅಗ್ರಪಟ್ಟ ತನ್ನದಾಗಿಸಿಕೊಂಡಿದೆ. ಒಟ್ಟು 61 ಪಂದ್ಯಗಳನ್ನಾಡಿರುವ ಆಸ್ಟ್ರೇಲಿಯಾ 118 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ 55 ಪಂದ್ಯಗಳನ್ನಾಡಿರುವ ದಕ್ಷಿಣ ಆಫ್ರಿಕಾ 118 ಅಂಕ ಪಡೆದು ಎರಡನೇ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾಗೆ ಪೈಪೋಟಿ ನೀಡ್ತಾ ಬಂದಿದೆ. ಇನ್ನು ಟೀಂ ಇಂಡಿಯಾ ಬಗ್ಗೆ ಹೇಳೋದಾದ್ರೆ ಒಟ್ಟು 56 ಪಂದ್ಯಗಳಲ್ಲಿ 112 ಅಂಕ ಗಳಿಸೊ ಮೂಲಕ ನ್ಯೂಜಿಲೆಂಡ್‍ಗೆ ಮೂರನೇ ಸ್ಥಾನ ಬಿಟ್ಟುಕೊಟ್ಟಿದೆ.
ಐಸಿಸಿ ಏಕದಿನ ರ್ಯಾಂಕಿಂಗ್ ಲಿಸ್ಟ್-2017
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಸತ್ರೂ ಲವ್ ಮ್ಯಾರೇಜ್ ಆಗಲ್ವಂತೆ ಈ ನಟಿ.
ಹಳ್ಳಿಡಾಕ್ಟ್ರು – ಇವರಿಂದಲೇ ಹಳ್ಳಿಯ ಸೊಗಡು ಇನ್ನು ಉಳಿದಿರೋದು.
ವಿಷ್ಣುದಾದರಿಂದ ಸೂಪರ್‍ಸ್ಟಾರ್ ಆದ್ರಂತೆ ಈ ನಟ..!
ಮ್ಯಾಟ್ರಿಮೋನಿ ವೆಬ್‍ಸೈಟ್‍ಗಳಲ್ಲಿ ನಂಬರ್ ಕೊಡೋಕು ಮುನ್ನ ಈ ಸ್ಟೋರಿನ ಮಿಸ್ ಮಾಡ್ದೆ ಓದಿ