ಗಂಗಾಜಲವನ್ನು ಪ್ರೋಕ್ಷಣೆ ಮಾಡಿ ಗಣೇಶ ಪ್ರತಿಷ್ಠಾಪನೆ ಮಾಡುತ್ತೇವೆ

Date:

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಪ್ರತಿ ವರ್ಷ ಗಣೇಶೋತ್ಸವ ಮಾಡೇ ಮಾಡುತ್ತೇವೆ ಎಂದು ಲಹರಿ ಆಡಿಯೋ ಸಂಸ್ಥೆ ಮಾಲೀಕ ಲಹರಿ ವೇಲು ಹೇಳಿದರು. ಪ್ರೆಸ್ ಕ್ಲಬ್​​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಗಂಗಾಜಲವನ್ನು ಪ್ರೋಕ್ಷಣೆ ಮಾಡಿ ಗಣೇಶ ಪ್ರತಿಷ್ಠಾಪನೆ ಮಾಡುತ್ತೇವೆ. ಯಾವುದೇ ಅಹಿತಕರ ಘಟನೆ ಇಲ್ಲದೆ ಎಲ್ಲಾ ಧರ್ಮದವರು ಹಬ್ಬದಲ್ಲಿ ಭಾಗಿಯಾಗಬಹುದು ಎಂದು ಹೇಳಿದರು. ಇನ್ನೂ ಗಣೇಶೋತ್ಸವದಲ್ಲಿ ಸಾವರ್ಕರ್ ಪೋಟೋ ಇಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರು ಅವರ ಪೋಟೊ ಇಡಿ ಎಂಬ ಒತ್ತಾಯ ಬಂದ್ರೆ ಇಡುತ್ತೇವೆ. ಸ್ವಾತಂತ್ರ್ಯ ಧ್ವಜಾರೋಹಣದ ದಿನ ಮುಸ್ಲಿಂರು ಸಹ ವಂದೇಮಾತರಂ ಗೀತೆ ಹಾಡಿದ್ರು. ಸುಮ್ಮನೆ ನಮ್ಮಲ್ಲಿ ಭೇದ-ಭಾವ ತರುವ ಪ್ರಯತ್ನ ಮಾಡಲಾಗುತ್ತಿದೆ. ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ಗಲಭೆ ಇಲ್ಲ, ಎಲ್ಲರೂ ಒಟ್ಟಾಗಿ ಗಣೇಶೋತ್ಸವ ಮಾಡುತ್ತೇವೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...