ಈದ್ಗಾ ಮೈದಾನಕ್ಕೆ ಪೋಲೀಸ್ ಸರ್ಪಗಾವಲು

0
31

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್ ಅವಕಾಶ ನಿರಾಕರಿಸಿದ ಬೆನ್ನಲ್ಲೇ ಮೈದಾನದ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳೂ ಮೈದಾನದಲ್ಲಿ ಬೀಡುಬಿಟ್ಟಿದ್ದಾರೆ. ಸಂಘಟನೆಗಳ ಮುಖಂಡರು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಂಗಳವಾರ ಬೆಳಿಗ್ಗೆ ಸಿದ್ಧತೆಯಲ್ಲಿ ತೊಡಗಿದ್ದರು. ಪೆಂಡಾಲ್ ಸಹ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದರು. ಸಂಜೆ ಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ಪೆಂಡಾಲ್ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಈದ್ಗಾ ಮೈದಾನದ ಸುತ್ತ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಬೆಂಗಳೂರು ಹಾಗೂ ಅಕ್ಕಪಕ್ಕದ ಜಿಲ್ಲೆಗಳಿಂದ ಈದ್ಗಾ ಬಂದೋಬಸ್ತ್ಗೆ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. 1,600 ಪೊಲೀಸರು ಹಗಲು, ಗ್ರೌಂಡ್ಬಳಿ ಬೀಡುಬಿಟ್ಟಿದ್ದಾರೆ. ಈ ಮೂಲಕ ಗಣೇಶೋತ್ಸವಕ್ಕೆ ಅವಕಾಶ ಕೊಡಲಿ ಬಿಡಲಿ, ಶಾಂತಿ ಭಂಗಕ್ಕೆ ಅವಕಾಶವಿಲ್ಲ ಅನ್ನೋ ಸಂದೇಶ ರವಾನೆ ಮಾಡಿದ್ದಾರೆ. ಮೈದಾನದ ಸುತ್ತ 3 ಡಿಸಿಪಿ, 21 ಎಸಿಪಿ, 47 ಪಿಐ, 130 ಪಿಎಸ್ಐ, 126 ಎಎಸ್ಐ, 900 ಹೆಚ್ಇ ಪಿಸಿ, 120 ಆರ್ಎಎಫ್, 100 ಸ್ವಾಟ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ.

LEAVE A REPLY

Please enter your comment!
Please enter your name here