ಈದ್ಗಾ ಮೈದಾನ ವಿವಾದಕ್ಕೆ ಅಂತ್ಯ ಹಾಡಿದ ಬಿಬಿಎಂಪಿ

Date:

ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಎಂದು ಬಿಬಿಎಂಪಿ ಆದೇಶ ಹೊರಡಿಸುತ್ತಿದ್ದಂತೆ ಚಾಮರಾಜಪೇಟೆಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚಾಮರಾಜಪೇಟೆಯ ನಾಗರಿಕರ ಒಕ್ಕೂಟ ಸೇರಿದಂತೆ ಅನೇಕ ಸಂಘಟನೆಗಳು ಇಂದು ಮೈದಾನದ ಬಳಿ ಸಮಾವೇಶಗೊಂಡು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ನಾಗರಿಕ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಬೀದಿಬದಿ ವ್ಯಾಪಾರಿಗಳು ಎಲ್ಲರೂ ಇಂದು ಸರ್ಕಾರಕ್ಕೆ ಮತ್ತು ಬಿಬಿಎಂಪಿಗೆ ಕೃತಜ್ಞತೆ ಸಲ್ಲಿಸಿದರು. ಬಹಳ ದಿನಗಳಿಂದ ಈ ಮೈದಾನ ಸರ್ಕಾರದ ಆಸ್ತಿಯಾಗಬೇಕೆಂದು ಹೋರಾಟ ಮಾಡುತ್ತಿದ್ದೇವೆ. ಇದು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ. ಇಂತಹ ಒಂದು ದಿಟ್ಟತನದ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಹೀಗಾಗಿ ನಾವು ಸರ್ಕಾರವನ್ನು ಅಭಿನಂದಿಸುತ್ತೇವೆ ಎಂದು ಒಕ್ಕೂಟದ ಮುಖಂಡ ಎಸ್.ರುಕ್ಮಾಂಗದ, ಪಾಲಿಕೆ ಮಾಜಿ ಸದಸ್ಯ ಬಿ.ವಿ.ಗಣೇಶ್ ಮತ್ತಿತರರು ಹೇಳಿದರು.

Share post:

Subscribe

spot_imgspot_img

Popular

More like this
Related

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ ನವದೆಹಲಿ:...

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ ಬೆಂಗಳೂರು: ರಾಜ್ಯದಲ್ಲಿ ವಿವಿಧ...

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್ ತುರ್ತು ನೋಟಿಸ್

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್...

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ ಬೆಂಗಳೂರು:...