ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಾಳೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನಡೆಯಲಿದೆ. ಈದ್ಗಾ ಮೈದಾನದ ಭದ್ರತೆಯ ಬಗ್ಗೆ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ. ನಾಳೆ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಮಾಡಿಕೊಳ್ಳಲಾಗಿದೆ. ಆರ್.ಎ.ಎಫ್, ರ್ಯಾಪಿಡ್ ಫೋರ್ಸ್ ಸೇರಿದಂತೆ 850ಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸ್ವಾತಂತ್ರೋತ್ಸವಕ್ಕೆ ಮೈದಾನದ ಒಳಗೆ ಸಾರ್ವಜನಿಕರಿಗೆ ನಿರ್ಬಂಧವಿಲ್ಲ. ಆದರೆ ಸಂಸ್ಥೆಗಳು ಮೈದಾನದ ಬ್ಯಾನರ್, ಫ್ಲೆಕ್ಸ್ ಅನ್ನು ಅಳವಡಿಸಲಾಗಿದೆ. ಧ್ವಜಾರೋಹಣ ಉತ್ತಮವಾಗಿ. ಶಾಲಾ ಮಕ್ಕಳು, ಅಧಿಕಾರಿಗಳು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾದ ಈದ್ಗಾ ಮೈದಾನ..!
Date: