ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಸಲಹೆಗಳನ್ನು ಪಾಲಿಸಿ..!
ರೋಗಗಳನ್ನು ದೂರವಿಡಲು ರೋಗನಿರೋಧಕ ಶಕ್ತಿ ಬಹಳ ಮುಖ್ಯ. ಅದರಲ್ಲಿಯೂ ನೀವು ಸೇವಿಸುವ ಆಹಾರವು ಪ್ರಮುಖ ಪಾತ್ರ ವಹಿಸುತ್ತದೆ, ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರುವುದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಒಂದು ಮಾರ್ಗವಾಗಿದೆ. ಕೆಲವು ಹಾನಿಕಾರಕ ಆಹಾರಗಳು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹಾನಿಗೊಳಿಸಬಹುದು. ಹಾಗಾದರೆ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವ ಇತರ ಮಾರ್ಗಗಳು ಯಾವವು? ಇಲ್ಲಿದೆ ಮಾಹಿತಿ.
1. ಸಮತೋಲಿತ ಆಹಾರವನ್ನು ಸೇವಿಸುವುದು:
ಪೋಷಕಾಂಶ ಭರಿತ ಸಮತೋಲಿತ ಆಹಾರವು ಪ್ರತಿರಕ್ಷಣಾ ವ್ಯವಸ್ಥೆಯ ಕಾರ್ಯ ನಿರ್ವಹಣೆಯನ್ನು ಹೆಚ್ಚಿಸುತ್ತದೆ, ಹಾಗಾಗಿ ಆದಷ್ಟು ಆಹಾರದಲ್ಲಿ ತರಕಾರಿಗಳು, ಹಣ್ಣುಗಳು, ಖನಿಜಗಳು, ಆರೋಗ್ಯಕರ ಕೊಬ್ಬುಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಆಹಾರಗಳ ಸೇವನೆ ಅತ್ಯಗತ್ಯ.
2. ದೇಹಕ್ಕೆ ಅಗತ್ಯವಿರುವಷ್ಟು ನೀರು ಕುಡಿಯಬೇಕು:
ಉತ್ತಮ ರೋಗನಿರೋಧಕ ಶಕ್ತಿ ಮತ್ತು ಉತ್ತಮ ಆರೋಗ್ಯವನ್ನು ಪಡೆಯಲು ಪ್ರತಿದಿನ ಸಾಕಷ್ಟು ಪ್ರಮಾಣದ ನೀರನ್ನು ಕುಡಿಯಬೇಕು.
3. ನಿಯಮಿತವಾಗಿ ವ್ಯಾಯಾಮ ಮಾಡಿ:
ಪ್ರತಿರಕ್ಷಣಾ ವ್ಯವಸ್ಥೆಯ ಹೆಚ್ಚಿಸಿಕೊಳ್ಳಲು ನಿಮ್ಮ ದಿನಚರಿಗೆ ಸ್ವಲ್ಪ ಮಟ್ಟಿನ ದೈಹಿಕ ಚಟುವಟಿಕೆಗಳನ್ನು ಸೇರಿಸಿಕೊಳ್ಳಿ ಎಂದು ಡಾ. ಗೋಯಲ್ ಸಲಹೆ ನೀಡುತ್ತಾರೆ. ಇವು ಹೇಹಕ್ಕೂ ಒಳ್ಳೆಯದು.
4. ಚೆನ್ನಾಗಿ ನಿದ್ರೆ ಮಾಡಿ:
7 ರಿಂದ 8 ಗಂಟೆಗಳ ಒಳ್ಳೆ ನಿದ್ರೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಅಲ್ಲದೆ ಇದು ಸೋಂಕಿನ ಅಪಾಯವನ್ನು ಕಡಿಮೆ ಮಾಡುತ್ತದೆ.
5. ಒತ್ತಡದ ಮಟ್ಟವನ್ನು ಸರಿಯಾಗಿ ನಿರ್ವಹಿಸಿ:
ಹೆಚ್ಚಿನ ಮಟ್ಟದ ಒತ್ತಡವು ಪ್ರತಿರಕ್ಷಣಾ ವ್ಯವಸ್ಥೆಗೆ ಹಾನಿಕಾರಕವಾಗಿದೆ. ಧ್ಯಾನ ಮತ್ತು ಕೆಲವು ಉಸಿರಾಟದ ಚಟುವಟಿಕೆಗಳಂತಹ ಒತ್ತಡ ನಿವಾರಕ ಚಟುವಟಿಕೆಗಳನ್ನು ನಿಮ್ಮ ದಿನಚರಿಯಲ್ಲಿ ಅಳವಡಿಸಿಕೊಳ್ಳಿ.