IND vs NZ: ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಮ್ ಇಂಡಿಯಾ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ

Date:

IND vs NZ: ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಮ್ ಇಂಡಿಯಾ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ


ಚಾಂಪಿಯನ್ಸ್ ಟ್ರೋಫಿ 2025 ರ ಫೈನಲ್ ಪಂದ್ಯವು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆದಿದ್ದು, ಎರಡೂ ತಂಡಗಳು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿತ್ತು. 25 ವರ್ಷಗಳ ನಂತರ ಈ ಟೂರ್ನಿಯ ಫೈನಲ್ನಲ್ಲಿ ಎರಡೂ ತಂಡಗಳು ಪರಸ್ಪರ ಎದುರಾಗಿ ಭಾರತ 3ನೇ ಚಾಂಪಿಯನ್ಸ್ ಟ್ರೋಫಿ ಕಿರೀಟ ಮುಡಿಗೇರಿಸಿಕೊಂಡಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ತೀರ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಬಲಿಷ್ಠ ಕಿವೀಸ್ ತಂಡವನ್ನು 5 ವಿಕೆಟ್ಗಳಿಂದ ಮಣಿಸಿದ ರೋಹಿತ್ ಪಡೆ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 7 ವಿಕೆಟ್ಗಳನ್ನು ಕಳೆದುಕೊಂಡು 251 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಸುಲಭವಾಗಿ ಗೆಲುವಿನ ದಡ ಮುಟ್ಟಿತು. ಚೇಸಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ \, ಶುಭಮನ್ ಗಿಲ್ ಸ್ಫೋಟಕ ಇನ್ನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರು.

112 ಎಸೆತಗಳಲ್ಲಿ ಈ ಜೋಡಿ 105 ರನ್ಗಳ ಜೊತೆಯಾಟ ನೀಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಫೈನಲ್ ಪಂದ್ಯದಲ್ಲಿ ಶತಕದ ಜೊತೆಯಾಟ ಎಂಬ ದಾಖಲೆಗೂ ರೋಹಿತ್ ಗಿಲ್ ಪಾತ್ರರಾದರು. ಗಿಲ್ 50 ಎಸೆತಗಳಲ್ಲಿ 31 ರನ್ ಗಳಿಸಿ ಔಟಾದರು. ಈ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ಎಲ್ಬಿಡಬ್ಲ್ಯೂಗೆ ತುತ್ತಾದರು. ಆ ಬಳಿಕವೂ ಕಿವೀಸ್ ಬೌಲರ್ಗಳನ್ನು ಬೆಂಡೆತ್ತಿದ ರೋಹಿತ್ 76 ರನ್ (83 ಎಸೆತ, 3 ಸಿಕ್ಸರ್, 7 ಬೌಂಡರಿ) ಗಳಿಸಿ ಪೆವಿಲಿಯನ್ಗೆ ಮರಳಿದರು.

Share post:

Subscribe

spot_imgspot_img

Popular

More like this
Related

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ?

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ? ಬೆಲೆ ಏರಲಿ,...

ಪ್ರತಿದಿನ ನಿಂಬೆ ಹಣ್ಣು ಸೇವನೆಯ 10 ಅದ್ಭುತ ಆರೋಗ್ಯ ಲಾಭಗಳು

ಪ್ರತಿದಿನ ನಿಂಬೆ ಹಣ್ಣು ಸೇವನೆಯ 10 ಅದ್ಭುತ ಆರೋಗ್ಯ ಲಾಭಗಳು ನಿಂಬೆಹಣ್ಣು ನಮ್ಮ...

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ:...

ಐ ಡ್ರಾಪ್ ಹಾಕಿಕೊಳ್ಳುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ!

ಐ ಡ್ರಾಪ್ ಹಾಕಿಕೊಳ್ಳುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ! ಐ ಡ್ರಾಪ್‌,...