ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ 6 ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ 3-0 ಅಂತರದ ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಹರಿಣಗಳ ನಾಡಿನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾಗಿದೆ.
ಇಂದು ಜೋಹಾನ್ಸ್ ಬರ್ಗ್ ನಲ್ಲಿ ನಡೆಯಲಿರುವ 4 ಏಕದಿನ ಪಂದ್ಯವನ್ನು ವಿರಾಟ್ ಪಡೆ ಗೆದ್ದಲ್ಲಿ ಹರಿಣಗಳ ನಾಡಿನಲ್ಲಿ ಪ್ರಥಮಬಾರಿಗೆ ದ್ವಿಪಕ್ಷೀಯ ಏಕದಿನ ಸರಣಿ ಗೆದ್ದ ದಾಖಲೆ ಬರೆಯಲಿದೆ.
ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳನ್ನು ಸೋತು ಸರಣಿ ಕಳೆದುಕೊಂಡಿದ್ದ ಭಾರತ ಮೂರನೇ ಟೆಸ್ಟ್ ನೊಂದಿಗೆ ಗೆಲುವಿನ ಹಳಿಗೆ ಮರಳಿತ್ತು. ಇದೀಗ ಏಕದಿನ ಏಕದಿನ ಸರಣಿಯಲ್ಲೂ ಗೆಲುವಿನ ಓಟ ಮುಂದುವರೆಸಿದೆ.
ಕ್ರಿಕೆಟ್ ಸೌತ್ ಆಫ್ರಿಕಾ ಸ್ತನ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸೋ ಅಭಿಯಾನಕ್ಕೆ ಕೈ ಜೋಡಿಸಿದ್ದು, ಪಿಂಕ್ ಏಕದಿನ ಎಂದು ದ.ಆಫ್ರಿಕ ಆಟಗಾರರು ಗುಲಾಬಿ ಬಣ್ಣದ ಜರ್ಸಿಯಲ್ಲಿ ಕಣಕ್ಕಿಳಿಯುತ್ತಾರೆ.
ಭಾರತೀಯ ಕಾಲಮಾನದ ಪ್ರಕಾರ ಸಂಜೆ4.30 ಕ್ಕೆ ಪಂದ್ಯ ಆರಂಭವಾಗಲಿದೆ.