ಪ್ರವಾಸಿ ಇಂಗ್ಲೆಂಡ್ ವಿರುದ್ದದ ಮೂರು ಏಕದಿನ ಹಾಗೂ ಟಿ20 ಪಂದ್ಯಕ್ಕೆ ಶುಕ್ರವಾರ ಮಧ್ಯಾಹ್ನ ತಂಡವನ್ನು ಪ್ರಕಟಿಸಿದ್ದು, ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಆಯ್ಕೆಯಾಗಿದ್ದಾರೆ. ಎಂಎಸ್‍ಕೆ ಪ್ರಸಾದ್ ನೇತೃತ್ವದ ಬಿಸಿಸಿಐ ಸಭೆಯಲ್ಲಿ ಇಂದು ತಂಡವನ್ನು ಪ್ರಕಟ ಮಾಡಲಾಗಿದ್ದು ಮಾಜಿ ನಾಯಕ ಧೋನಿ ತಂಡದಲ್ಲಿ ಆಟಗಾರನಾಗಿ ಮುಂದುವರೆಯಲಿದ್ದಾರೆ. ಉಳಿದಂತೆ ತಂಡಕ್ಕೆ ಎಡಗೈ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಹಾಗೂ ಆಶೀಶ್ ನೆಹ್ರ ಮತ್ತೆ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ. ಮೂರು ಏಕದಿನ ಪಂದ್ಯಕ್ಕೆ ಹಾಗೂ ಟಿ20ಗೆ ಅಂತಿಮ 15 ಮಂದಿ ಆಟಗಾರರನ್ನು ಪ್ರಕಟಿಸಲಾಗಿದ್ದು ಇದೇ ತಿಂಗಳ 15ರಂದು ಪುಣೆಯಲ್ಲಿ ಮೊದಲ ಏಕದಿನ ಪಂದ್ಯ ಆರಂಭವಾಗಲಿದೆ. ಇನ್ನು ರಾಜ್ಯದ ಇಬ್ಬರು ಆಟಗಾರರು ತಂಡಕ್ಕೆ ಆಯ್ಕೆಯಾಗಿದ್ದು ಕೆ.ಎಲ್ ರಾಹುಲ್ ಹಾಗೂ ಮನೀಷ್ ಪಾಂಡೆ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ. ಆದ್ರೆ ಈ ಬಾರಿಯೂ ಕೂಡ ಏಕದಿನ ಪಂದ್ಯಕ್ಕೆ ರೈನಾ ಅವರನ್ನು ಆಯ್ಕೆಗಾರರು ಕಡೆಗಣಿಸಿದ್ದಾರೆ. ಕರುಣ್ ನಾಯರ್ ಹಾಗೂ ವಿನಯ್ ಕುಮಾರ್ ತಂಡದಿಂದ ಹೊರಗುಳಿದಿದ್ದಾರೆ.
ಏಕದಿನ ತಂಡದ ಸದಸ್ಯರು:
ವಿರಾಟ್ ಕೊಹ್ಲಿ(ನಾಯಕ), ಎಂಎಸ್ ಧೋನಿ(ವಿಕೆಟ್ ಕೀಪರ್), ಕೆಎಲ್ ರಾಹುಲ್, ಶಿಖರ್ ಧವನ್, ಮನೀಷ್ ಪಾಂಡೆ, ಕೇದಾರ್ ಜಾಧವ್, ಯುವರಾಜ್ ಸಿಂಗ್, ಅಜಿಂಕ್ಯ ರಹಾನೆ, ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಮಿತ್ ಮಿಶ್ರಾ, ಜಸ್ಪ್ರಿತ್ ಬೂಮ್ರಾ, ಭುವನೇಶ್ವರ್ ಕುಮಾರ್ ಮತ್ತು ಉಮೇಶ್ ಯಾದವ್.
ಟಿ20 ಪಂದ್ಯಕ್ಕೆ ತಂಡ:
ವಿರಾಟ್ ಕೊಹ್ಲಿ(ನಾಯಕ), ಎಂಎಸ್ ಧೋನಿ(ವಿಕೆಟ್ ಕೀಪರ್), ಕೆಎಲ್ ರಾಹುಲ್, ಮನ್‍ದೀಪ್ ಸಿಂಗ್, ಸುರೇಶ್ ರೈನಾ, ಯುವರಾಜ್ ಸಿಂಗ್, ರಿಶಬ್ ಪಂತ್, ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಯಜುವೇಂದ್ರ ಚಾಹಲ್, ಜಸ್ಪ್ರಿತ್ ಬೂಮ್ರಾ, ಭುವನೇಶ್ವರ್ ಕುಮಾರ್ ಮತ್ತು ಆಶೀಶ್ ನೆಹ್ರಾ.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ನೋ ಪಾರ್ಕಿಂಗ್ ಪ್ಲೇಸ್‍ನಲ್ಲಿ ಗಾಡಿ ನಿಂತಿದ್ರೆ ಫೋಟೋ ಕ್ಲಿಕ್ಕಿಸಿ ನೂರು ರೂ. ಬಹುಮಾನ ಗೆಲ್ಲಿ..!!
ಸ್ಯಾಂಡಲ್‍ವುಡ್ ಕ್ವೀನ್‍ನ ಹಿಂದಿಕ್ಕಿದ್ದಾಳಂತೆ ಈ ನಟಿಮಣಿ?
ನೊಬೆಲ್ ವಿಜೇತರಿಗೆ 100 ಕೋಟಿ ಬಂಪರ್ ಆಫರ್..!
ಕ್ಯಾಪ್ಟನ್ ಕೂಲ್ ನಾಯಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾದ್ರೂ ಯಾಕೆ..?
ಹೊಸ 2000ರೂ. ನೋಟಿನಲ್ಲಿ ಕಾಣೆಯಾಗಿದ್ದಾರೆ ಗಾಂಧೀಜಿ..!!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ಮುಂದೆ ಮಳೆ ಬಂದ್ರೂ ಪಂದ್ಯ ರದ್ದಾಗಲ್ಲ..!!
ಅಂತೂ ಮುಗೀತು ಜಿಯೋ ವೆಲ್‍ಕಮ್ ಆಫರ್..! ಹಾಗಾದ್ರೆ ಮುಂದಿನ ಪ್ಲಾನ್ ಏನು..?