ಮಾಜಿ ಸೈನಿಕರ ಕಥೆ…

1
79

ಅವರಿಬ್ಬರೂ ಮಾಜಿ ಸೈನಿಕರು. ವಯಸ್ಸಾದ ಕಾರಣದಿಂದ ಕಾಯಿಲೆಗೆ ತುತ್ತಾಗಿ ಆಸ್ಪತ್ರೆ ಸೇರಿದ್ದರು. ಬದುಕುತ್ತೇವೆ ಎಂಬ ಭರವಸೆ ಇಬ್ಬರಿಗೂ ಇರಲಿಲ್ಲ. ಆದರೂ ದೂರದ ಆಸೆಯೊಂದಿಗೆ ಆಸ್ಪತ್ರೆ ಸೇರಿದ್ದರು. ಈ ಪೈಕಿ ಒಬ್ಬನಿಗೆ ಎದ್ದೇಳುವ ತ್ರಾಣವೂ ಇರಲಿಲ್ಲ. ಆತ ಯಾವಾಗಲೂ ಅಂಗಾತ ಮಲಗಿಯೇ ಇರಬೇಕಿತ್ತು. ಇನ್ನೊಬ್ಬನ ಬೆಡ್ ಕಿಟಕಿಯ ಪಕ್ಕದಲ್ಲಿತ್ತು. ಈತ ದಿನವೂ ಸಂಜೆ ಒಂದು ಗಂಟೆಯ ಕಾಲ ಎದ್ದು ಕೂರುತ್ತಿದ್ದ. ಪರಿಚಯವಾದ ಒಂದೆರಡೇ ದಿನಗಳಲ್ಲಿ ಈ ಇಬ್ಬರೂ ಆಪ್ತರಾದರು. ಮೊದಲು ತಮ್ಮ ವೃತ್ತಿಯ ಬಗ್ಗೆ, ಆ ದಿನಗಳಲ್ಲಿ ಇದ್ದ ಉತ್ಸಾಹ, ಆವೇಶದ ಬಗ್ಗೆ ಮಾತಾಡಿದರು. ನಂತರ ಹೆಂಡತಿ, ಮಕ್ಕಳು ಬಂಧು-ಬಳಗದ ಬಗ್ಗೆ ಮಾತಾಡಿಕೊಂಡರು.ಕುಟುಂಬದ ವಿಷಯವನ್ನೇ ಅವೆಷ್ಟು ಬಾರಿ ಹೇಳಿಕೊಳ್ಳಲು ಸಾಧ್ಯ? ಅದೊಂದು ದಿನ, ಆ ಕಿಟಕಿಯ ಪಕ್ಕದ ಬೆಡ್‌ನಲ್ಲಿದ್ದವನು ಇದೇ ವಿಷಯ ಪ್ರಸ್ತಾಪಿಸಿದ. ನಂತರ- ನಾಳೆ ಸಂಜೆಯಿಂದ ಒಂದು ಗಂಟೆಯ ಅವಧಿಯಲ್ಲಿ ಇಲ್ಲಿಂದ ನನಗೆ ಕಾಣುವ ಪ್ರತಿಸಂಗತಿಯನ್ನೂ ಕಾಮೆಂಟರಿ ಥರಾ ನಿನಗೆ ಹೇಳ್ತೇನೆ’ ಎಂದ. ಸರಿ, ಮರುದಿನದಿಂದಲೇ ಈ ಗೆಳೆಯರ ಕಾಮೆಂಟರಿ ಶುರುವಾಯ್ತು: ಇಲ್ಲಿ ನೋಡು, ಈ ಕಿಟಕಿಯಿಂದಾಚೆಗೆ ಒಂದು ವಿಶಾಲ ಬಯಲಿದೆ. ಅದರ ಪಕ್ಕದಲ್ಲೇ ಒಂದು ಕೊಳವಿದೆ. ಅದರೊಳಗೆ ಎರಡು ಹಂಸಗಳಿವೆ. ಕೊಳದ ಮೇಲಿರುವ ಕಲ್ಲು ಬೆಂಚಿನ ಮೂಲೆಯಲ್ಲಿ ಪ್ರೇಮಿಗಳ ಹಿಂಡು ಕೂತಿದೆ. ಆ ಹುಡುಗಿ ಯಾವುದೋ ಕಾರಣಕ್ಕೆ ಸಿಟ್ಟಾಗಿದ್ದಾಳೆ. ಹುಡುಗ ಅವಳಲ್ಲಿ ಕ್ಷಮೆ ಕೇಳುತ್ತಿದ್ದಾನೆ. ಈ ಕೊಳದ ನೀರು, ಸಂಜೆಯ ಸೂರ್ಯಕಿರಣದ ಬೆಳಕನ್ನು ಪ್ರತಿಫಲಿ ಸುತ್ತಿದೆ… ಉದ್ಯಾನದಲ್ಲಿ ತರಹೇವಾರಿ ಹೂಗಳು ಅರಳಿವೆ. ಆ ಹೂಗಳನ್ನು ನೋಡುತ್ತಾ ಚಿಕ್ಕ ಮಕ್ಕಳು ಮೈಮರೆತಿವೆ. ಬಯಲಿನ ಇನ್ನೊಂದು ಮೂಲೆಯಲ್ಲಿ ವಯಸ್ಸಾದ ದಂಪತಿ ಏನನ್ನೋ ನೆನಪು ಮಾಡಿಕೊಂಡು ಕಂಬನಿ ಸುರಿಸುತ್ತಿದ್ದಾರೆ. ಅಲ್ಲಿಂದ ಕೂಗಳತೆಯ ದೂರವಿರುವ ಮರದ ಕೆಳಗೆ ಪ್ರೇಮಿಗಳಿಬ್ಬರು ಮುದ್ದು ಮಾಡುತ್ತಿದ್ದಾರೆ…ದಿನವೂ ಹೀಗೇ ಸಾಗುತ್ತಿತ್ತು ರನ್ನಿಂಗ್ ಕಾಮೆಂಟರಿ. ಅವನು ಕಿಟಕಿಯ ಪಕ್ಕ ಕೂತು ಆಗಿಂದಾಗ್ಗೆ ಮುಖ ಅರಳಿಸುತ್ತಾ, ಕೈಯಾಡಿಸುತ್ತಾ ಒಂದೊಂದೇ ವಿವರಣೆ ಹೇಳುತ್ತಿದ್ದರೆ, ಹಾಸಿಗೆಯಲ್ಲಿ ಅಂಗಾತ ಮಲಗಿದ್ದ ವ್ಯಕ್ತಿ, ಅವನ್ನೆಲ್ಲ ಇದ್ದಲ್ಲೇ ಅಂದಾಜು ಮಾಡಿಕೊಂಡು ಖುಷಿಪಡುತ್ತಿದ್ದ. ಪ್ರೇಮಿಗಳಿಬ್ಬರೂ ಮುದ್ದಾಡುತ್ತಿದ್ದಾರೆ ಎಂದಾಗ, ತನ್ನ ಹರೆಯದ ಆಟಗಳ ನೆನಪಾಗಿ ನಸುನಗುತ್ತಿದ್ದ.ಮುಂದೊಂದು ದಿನ- ಕಾಮೆಂಟರಿ ಕೊಡುತ್ತಿದ್ದ ಗೆಳೆಯ- ಈಗ ನೋಡು ಗುರೂ, ಮೈದಾನದಲ್ಲಿ ದೊಡ್ಡದೊಂದು ಮೆರವಣಿಗೆ ಹೋಗ್ತಾ ಇದೆ. ಮುಂದೆ ಆನೆಗಳಿವೆ. ಹಿಂದೆ ಕುದುರೆಗಳ ಹಿಂಡು. ಅದರ ಹಿಂದೆಒಂಟೆಗಳು ಎಂದ! ಅಷ್ಟು ದೊಡ್ಡ ಮೆರವಣಿಗೆ ಅಂದ ಮೇಲೆ ಭಾರೀ ಸದ್ದು-ಗದ್ದಲ ಕೇಳಿಸಬೇಕು ತಾನೆ? ಹಾಗೇನೂ ಕೇಳಿಸಲಿಲ್ಲ. ಹಾಸಿಗೆಯಲ್ಲೇ ಮಲಗಿದ್ದವನು, ಕಾಮೆಂಟರಿ ಕೊಡುತ್ತಿದ್ದ ಗೆಳೆಯನಿಗೆ ಇದನ್ನೇ ಹೇಳಬೇಕು ಅಂದುಕೊಂಡ. ಆದರೆ ವಯಸ್ಸಿನ ಕಾರಣ, ಕಾಯಿಲೆಯ ಕಾರಣದಿಂದ ನನಗೇ ಕಿವುಡುತನ ಉಂಟಾಗಿರಬಹುದು ಎಂದುಕೊಂಡು ಸುಮ್ಮನಾಗಿಬಿಟ್ಟ. ಹೀಗೆಯೇ ದಿನ, ವಾರ, ತಿಂಗಳುಗಳೂ ಕಳೆದವು. ಒಂದು ಬೆಳಗ್ಗೆ, ರೋಗಿಗಳ ಬೆಡ್‌ಶೀಟ್ ಬದಲಿಸಲೆಂದು ಬಂದನರ್ಸ್, ಮೊದಲಿಗೆ ಕಿಟಕಿಯ ಬಳಿ ಇದ್ದ ರೋಗಿಯ ಬಳಿ ಹೋದಳು. ಆತ ನಿದ್ರೆ ಮಾಡುತ್ತಿದ್ದ ವೇಳೆಯಲ್ಲೇ ಸತ್ತುಹೋಗಿದ್ದ. ಅದುವರೆಗೂ ಕಾಮೆಂಟರಿ ಹೇಳುತ್ತಿದ್ದ ಗೆಳೆಯ ಜತೆಗಿಲ್ಲ ಎಂಬ ಕಾರಣದಿಂದ ಇನ್ನೊಬ್ಬನಿಗೆ ತುಂಬಾ ಸಂಕಟವಾಯಿತು. ಹೊರಗಿನ ದೃಶ್ಯ ನೋಡಿಕೊಂಡು ಎಲ್ಲ ಸಂಕಟ ಮರೆಯೋಣ ಎಂದು ಯೋಚಿಸಿದ ಆತ, ತನಗೆ ಕಿಟಕಿ ಪಕ್ಕದ ಬೆಡ್ ಕೊಡುವಂತೆ ನರ್ಸ್‌ಗೆ ಕೇಳಿದ. ಕೆಲವೇ ನಿಮಿಷಗಳಲ್ಲಿ ಆ ವ್ಯವಸ್ಥೆಯೂ ಆಯಿತು. ಅದುವರೆಗೂ ಕಾಮೆಂಟರಿಯಲ್ಲಿ ಕೇಳಿದ್ದ ದೃಶ್ಯಗಳನ್ನು ಮತ್ತೆಮತ್ತೆ ನೆನಪಿಸಿಕೊಂಡು ಈತ ಸಡಗರದಿಂದಲೇ ಕಿಟಕಿಯಿಂದಾಚೆ ನೋಡಿ ಬೆಚ್ಚಿಬಿದ್ದ. ಏಕೆಂದರೆ, ಅಲ್ಲಿ ಒಂದು ಗೋಡೆಯನ್ನು ಬಿಟ್ಟರೆ ಬೇರೇನೂ ಇರಲಿಲ್ಲ.ಈಗ ಗಾಬರಿಗೊಂಡು ನರ್ಸ್‌ಗಳನ್ನು ಕರೆದ. ಬಂದವರಿಗೆಲ್ಲ ತನ್ನ ಗೆಳೆಯ ಹೇಳುತ್ತಿದ್ದ ರನ್ನಿಂಗ್ ಕಾಮೆಂಟರಿ ನೆನಪಿಸಿ ಪಾರ್ಕು, ಹೂಗಿಡ, ಈಜುಕೊಳ, ಮೆರವಣಿಗೆಯ ರಸ್ತೆ, ಪ್ರೇಮಿಗಳ ಪಿಸುಮಾತು… ಇದೆಲ್ಲ ಎಲ್ಲಿ ಮಾಯವಾಯ್ತು ಎಂದು ಬೆರಗಿನಿಂದ ಕೇಳಿದ. ಆಗ ಅವನನ್ನೇ ಅನುಕಂಪದಿಂದ ನೋಡುತ್ತಾ ನರ್ಸೊಬ್ಬಳು ಹೀಗೆಂದಳು: ಈಗ ನೀವು ನೋಡ್ತಾ ಇದೀರಲ್ಲ, ಇದೇ ಸತ್ಯ. ಒಂದು ವಿಷಯ ಗೊತ್ತಾ? ರನ್ನಿಂಗ್ ಕಾಮೆಂಟರಿ ಕೊಡುತ್ತಿದ್ದ ನಿಮ್ಮ ಗೆಳೆಯನಿಗೆ ಕಣ್ಣು ಕಾಣ್ತಾ ಇರಲಿಲ್ಲ. ಯುದ್ಧದಲ್ಲಿ ಅವರು ಕಣ್ಣುಗಳನ್ನು ಕಳಕೊಂಡಿದ್ರು. ನಿಮ್ಮಲ್ಲಿ ಜೀವನೋತ್ಸಾಹ ಹೆಚ್ಚಿಸಬೇಕೆಂ
ಬ ಆಸೆಯಿಂದ ಅವರು ಹಾಗೆಲ್ಲ ಹೇಳ್ತಾ ಇದ್ರು. ನಾವೆಂಥ ಸ್ಥಿತಿಯಲ್ಲೇ ಇರಲಿ ಬೇರೆಯವರನ್ನು ಖುಷಿಪಡಿಸುವುದರಲ್ಲೂ ನೆಮ್ಮದಿ, ಸಮಾಧಾನವಿದೆ.

  • ಚೇತನ್ ದಾಸರಹಳ್ಳಿ

If you Like this Story , Like us on Facebook  The New India Times

POPULAR  STORIES :

ದೇವರು ಅಂತ ಕರೆಸಿಕೊಂಡವರ ಮೇಲೆ ರಾಶಿ-ರಾಶಿ ಕೇಸ್..!! ನಿನ್ನನ್ನು ನೀನೇ ಕಾಪಾಡಿಕೋ ಭಗವಂತ..!!

ಬಹುನಿರೀಕ್ಷಿತ 3 ಪೆಗ್ ಕನ್ನಡ ರ್ಯಾಪ್ ಸಾಂಗ್ ..!

70 ವರ್ಷದ ಕುರುಡು ಅಜ್ಜಿಗೆ ಕಣ್ಣುಬಂತು..!? ವಿಜ್ಞಾನವನ್ನೇ ಬೆಚ್ಚಿಬೀಳಿಸಿದ ಘಟನೆ..!

ಹಾಸನ ಸೂಸೈಡ್ ಕೇಸ್ಗೆ ಟ್ವಿಸ್ಟ್..! ಅವನ ಸಾವಿಗೆ ಕಾರಣವಾಗಿದ್ದು `ಪ್ರೇಯಸಿ’ ರೂಪದ ಅತ್ತಿಗೆ..!

ಮಾದಕ ನಟಿಗೆ ಇವತ್ತು ಬರ್ತ್ ಡೇ ಸಂಭ್ರಮ..! ಅವಳ ಬದುಕಿನಲ್ಲಿ ಗುಡುಗು, ಸಿಡಿಲಿನದ್ದೇ ಆರ್ಭಟ..! Sunny Leone Story

“ನಿನ್ನ ಪ್ರೀತಿ ಇಲ್ಲದೇ ನಾನು ಬದುಕಿರೋದಿಲ್ಲ.. ಬದುಕಿದ್ರೆ ನಿನ್ನ ಜೊತೆನೇ ನೆನಪಿರಲಿ ಚಾಂದಿನಿ”

ಅವ್ನಿಗೆ ಪ್ರೇಯಸಿಯನ್ನು ಬುಲ್ಲೆಟ್ನಲ್ಲಿ ಕೂರಿಸೋ ಆಸೆ..!? ಅದಕ್ಕಾಗಿ ಅವ್ನು ಏನ್ ಮಾಡ್ದ ಗೊತ್ತಾ..!?

1 COMMENT

LEAVE A REPLY

Please enter your comment!
Please enter your name here