Home ಎಲ್ಲೆಲ್ಲಿ ಏನೇನು.? IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ ಔಟ್?

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ ಔಟ್?

0
IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ ಔಟ್?

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ ಔಟ್?

ಐಪಿಎಲ್ 2026ರ ಮೊದಲ ಎರಡು ವಾರಗಳಲ್ಲಿ ಎಂ.ಎಸ್ ಧೋನಿಅವರು ಆಡಲಿರುವುದು ಅನುಮಾನವಾಗಿದೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ತಿಳಿಸಿದೆ. ಸಿಎಸ್ಕೆ ನೀಡಿದ ಮಾಹಿತಿಯ ಪ್ರಕಾರ, ಧೋನಿ ಸ್ನಾಯು ಸೆಳೆತ ಸಮಸ್ಯೆಯಿಂದ ಬಳಲುತ್ತಿದ್ದು,
ಪ್ರಸ್ತುತ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರಣದಿಂದ ಅವರು ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ.
ಇಂದಿನಿಂದ ಐಪಿಎಲ್ 2026 ಆರಂಭವಾಗುತ್ತಿದೆ. ಮಾ.30ರಂದು ರಾಜಸ್ಥಾನ ರಾಯಲ್ಸ್ ಜೊತೆ ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಪಂದ್ಯ ಆಡಲಿದೆ. ಬಳಿಕ ಏ.3ರಂದು ತವರು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಜೊತೆ ಆಡಲಿದೆ.
ಸಿಎಸ್ಕೆ ಪ್ರ್ಯಾಕ್ಟೀಸ್ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಧೋನಿ ಬ್ಯಾಟಿಂಗ್ ಮಾಡುತ್ತಿದ್ದು, ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದರು. ಹೀಗಾಗಿ ಮೊದಲ ಎರಡು ವಾರಗಳಲ್ಲಿ ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಮಾಡಲಿದ್ದಾರೆ ಎನ್ನಲಾಗಿದೆ.