IPL : ಮೂರನೇ ವಾರದ ಬೆಸ್ಟ್ ಪ್ಲೇಯರ್ಸ್

Date:

ಏಪ್ರಿಲ್ 23ರಿಂದ ಏಪ್ರಿಲ್ 29ರವರೆಗೆ ಅಂದರೆ ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೂರನೇ ವಾರದಲ್ಲಿ ಹಲವಾರು ಅದ್ಭುತ ಪ್ರದರ್ಶನಗಳು ಆಟಗಾರರಿಂದ ಬಂದಿವೆ. ಮೂರನೇ ವಾರದಲ್ಲಿ ಒಟ್ಟು 9 ಪಂದ್ಯಗಳು ನಡೆದಿದ್ದು ಕಳೆದ ವಾರಕ್ಕೆ ಹೋಲಿಸಿದರೆ ಅಂಕಪಟ್ಟಿಯಲ್ಲಿ ದೊಡ್ಡಮಟ್ಟದಲ್ಲಿಯೇ ಬದಲಾವಣೆಗಳುಂಟಾಗಿವೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೂರನೇ ವಾರದಲ್ಲಿಯೂ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.

ಉಳಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮೂರನೇ ವಾರವೂ ಸಹ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಉತ್ತಮ ಸ್ಥಾನದಲ್ಲಿವೆ. ಹೀಗಾಗಿ ಮೂರನೇ ವಾರದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ , ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಅದ್ಬುತ ಪ್ರದರ್ಶನ ನೀಡಿದ ತಂಡಗಳಾಗಿದ್ದು ಸತತ ಸೋಲಿನಿಂದ ಕಂಗೆಟ್ಟಿದ್ದ ಮುಂಬೈ ಇಂಡಿಯನ್ಸ್ ತಂಡ ಗೆಲುವಿನ ಹಾದಿಗೆ ಮರಳಿದೆ. ತಂಡಗಳನ್ನು ಹೊರತುಪಡಿಸಿ ವೈಯಕ್ತಿಕವಾಗಿ ಯಾವ ಯಾವ ಆಟಗಾರರು ಮೂರನೇ ವಾರದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂಬ ಮಾಹಿತಿ ಮುಂದೆ ಇದೆ ಓದಿ.

 

 

1. ಅತ್ಯಧಿಕ ರನ್

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪೃಥ್ವಿ ಶಾ 156 ರನ್ ಬಾರಿಸುವುದರ ಮೂಲಕ ಮೂರನೇ ವಾರದಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರನಾಗಿದ್ದಾರೆ.

2. ಅತ್ಯಧಿಕ ವಿಕೆಟ್

ರಾಜಸ್ಥಾನ್ ರಾಯಲ್ಸ್ ತಂಡದ ಕ್ರಿಸ್ ಮೊರಿಸ್ ಮೂರನೇ ವಾರದಲ್ಲಿ 6 ವಿಕೆಟ್ ಪಡೆಯುವುದರ ಮೂಲಕ ಅತಿಹೆಚ್ಚು ವಿಕೆಟ್ ಪಡೆದ ಆಟಗಾರನಾಗಿದ್ದಾರೆ.

 

3. ಹೆಚ್ಚು ಸಿಕ್ಸರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಆಟಗಾರ ಎಬಿ ಡಿವಿಲಿಯರ್ಸ್ ಮೂರನೇ ವಾರ 5 ಸಿಕ್ಸರ್ ಬಾರಿಸುವ ಮೂಲಕ ಅತ್ಯಧಿಕ ಸಿಕ್ಸರ್ ಬಾರಿಸಿದ ಆಟಗಾರನಾಗಿದ್ದಾರೆ.

4. ಅತ್ಯಧಿಕ ಬೌಂಡರಿ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಪೃಥ್ವಿ ಶಾ ಮೂರನೇ ವಾರದಲ್ಲಿ 21 ಬೌಂಡರಿಗಳನ್ನು ಬಾರಿಸುವುದರ ಮೂಲಕ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

5. ವೇಗದ ಅರ್ಧಶತಕ

ಪೃಥ್ವಿ ಶಾ ಮೂರನೇ ವಾರದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 18 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಪ್ರಸ್ತುತ ಟೂರ್ನಿಯ ಅತಿ ವೇಗದ ಅರ್ಧಶತಕವನ್ನು ಬಾರಿಸಿದ್ದಾರೆ.

6. ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ

ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 41 ಎಸೆತಗಳಲ್ಲಿ 82 ರನ್ ಬಾರಿಸಿದ ಪೃಥ್ವಿ ಶಾ ಮೂರನೇ ವಾರದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಆಟಗಾರ ಎನಿಸಿಕೊಂಡಿದ್ದಾರೆ.

7. ಅತ್ಯುತ್ತಮ ಬೌಲಿಂಗ್ ಪ್ರದರ್ಶನ

ಏಪ್ರಿಲ್ 24ರಂದು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಕ್ರಿಸ್ ಮೊರಿಸ್ 4 ಓವರ್‌ ಎಸೆದು 23 ರನ್ ನೀಡಿ 4 ವಿಕೆಟ್‍ಗಳನ್ನು ಪಡೆದುಕೊಳ್ಳುವುದರ ಮೂಲಕ ಮೂರನೇ ವಾರದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಆಟಗಾರ ಎನಿಸಿಕೊಂಡಿದ್ದಾರೆ.

 

8. ಅತಿ ಉದ್ದದ ಸಿಕ್ಸ್

ಪಂಜಾಬ್ ಕಿಂಗ್ಸ್ ತಂಡದ ಆಟಗಾರ ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ 93 ಮೀಟರ್ ಉದ್ದದ ಸಿಕ್ಸರ್ ಸಿಡಿಸುವುದರ ಮೂಲಕ ಮೂರನೇ ವಾರದಲ್ಲಿ ಅತಿ ಉದ್ದದ ಸಿಕ್ಸರ್ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...