ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೊಂದು ಸೋಲು ಕಂಡಿದೆ. ಒಟ್ಟಾರೆ ನಾಲ್ಕು ಪಂದ್ಯಗಳಿಂದ ಕೇವಲ ಒಂದೇ ಒಂದು ಗೆಲುವು ಕಂಡಂತಾಗಿದೆ. ಸತತ ಮೂರು ಪಂದ್ಯಗಳನ್ನು ಸೋತಿದ್ದ ಮುಂಬೈ ಇಂಡಿಯನ್ಸ್ 46 ರನ್ ಗಳ ಜಯಬೇರಿ ಭಾರಿಸಿದೆ.
ಮುಂಬೈಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಮೊದಲ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಒಂದಾದ ಲಿವಿಸ್ ಹಾಗೂ ನಾಯಕ ರೋಹಿತ್ ಶರ್ಮಾ ಶತಕದ ಜೊತೆಯಾಟ ಆಡಿದರು. ಲಿವಿಸ್ (65) ಮತ್ತು ಶರ್ಮಾ (94) ಅವರ ಅರ್ಧ ಶತಕದ ನೆರವಿನಿಂದ 213 ರನ್ ಗಳಿಸಿತು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಆರ್ ಸಿ ಬಿ 20 ಓವರ್ ಗಳಲ್ಲಿ 8ವಿಕೆಟ್ ಕಳೆದುಕೊಂಡು ಕೇವಲ 167 ರನ್ ಗನ್ನಷ್ಟೇ ಗಳಿಸಲು ಶಕ್ತವಾಯಿತು. ನಾಯಕ ವಿರಾಟ್ ಕೊಹ್ಲಿ ಅಜೇಯ 92 ರನ್ ಗಳಿಸಿ ಏಕಾಂಗಿ ಹೋರಾಟ ನಡೆಸಿದರೂ ಗೆಲುವು ಮರೀಚಿಕೆ ಆಯಿತು.