IPL 2025: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ CSKಗೆ ಗೆಲುವು: 5 ವಿಕೆಟ್ʼಗಳಿಂದ ಗೆಲುವು ಕಂಡ ಧೋನಿ ಟೀಂ
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಕೊನೆಗೂ ಜಯ ಸಾಧಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 30ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಸಿಎಸ್ಕೆ 5 ವಿಕೆಟ್ಗಳ ಗೆಲುವು ದಾಖಲಿಸಿದೆ.
ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಇದಾಘ್ಯೂ ರಿಷಭ್ ಪಂತ್ 49 ಎಸೆತಗಳಲ್ಲಿ 63 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್ಗಳಲ್ಲಿ 166 ರನ್ ಕಲೆಹಾಕಿತು.
167 ರನ್ಗಳ ಸ್ಪರ್ಧಾತ್ಮಕ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 15 ಓವರ್ಗಳಲ್ಲಿ ಕಲೆಹಾಕಿದ್ದು ಕೇವಲ 111 ರನ್ಗಳು ಮಾತ್ರ. ಕೊನೆಯ 5 ಓವರ್ಗಳಲ್ಲಿ ಸಿಎಸ್ಕೆ ತಂಡವು 55 ರನ್ಗಳ ಗುರಿ ಪಡೆದಿತ್ತು. ಇದಾಗ್ಯೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ತೆಗೆದುಕೊಂಡ ಅಚ್ಚರಿಯ ನಿರ್ಧಾರಗಳೇ LSG ಪಾಲಿಗೆ ಮುಳುವಾಯಿತು.
ಶಿವಂ ದುಬೆ 37 ಎಸೆತಗಳಲ್ಲಿ ಅಜೇಯ 43 ರನ್ ಗಳಿಸಿದರು. ರಚಿನ್ ರವೀಂದ್ರ 37 ರನ್ ಮತ್ತು ಶೇಖ್ ರಶೀದ್ 27 ರನ್ಗಳ ಕಾಣಿಕೆ ನೀಡಿದರು. ಇನ್ನು ಮೊದಲು ಬ್ಯಾಟ್ ಮಾಡಿದ್ದ ಎಲ್ಎಸ್ಜಿ 7 ವಿಕೆಟ್ ಕಳೆದುಕೊಂಡು 166 ರನ್ಗಳಿಸಿತ್ತು. ವಿಶೇಷ ಅಂದ್ರೆ ನಾಯಕ ರಿಷಬ್ ಪಂತ್ ಅವರು ಸ್ಫೋಟಕ ಬ್ಯಾಟಿಂಗ್ ಆಡಿದರು. 49 ಬಾಲ್ನಲ್ಲಿ ನಾಲ್ಕು ಸಿಕ್ಸ್, ನಾಲ್ಕು ಬೌಂಡರಿ ಬಾರಿಸಿ ಬರೋಬ್ಬರಿ 63 ರನ್ಗಳಿಸಿದರು. ಮಿಚೆಲ್ ಮಾರ್ಷ್ ಎಲ್ಎಸ್ಜಿ ಪರ 30 ರನ್ಗಳ ಕಾಣಿಕೆ ನೀಡಿದರು.