IPL 2025: CSK ವಿರುದ್ಧ ಚೆನ್ನೈನಲ್ಲಿ ಭರ್ಜರಿ ಗೆಲುವು ಸಾಧಿಸಿದ RCB

Date:

IPL 2025: CSK ವಿರುದ್ಧ ಚೆನ್ನೈನಲ್ಲಿ ಭರ್ಜರಿ ಗೆಲುವು ಸಾಧಿಸಿದ RCB

 

ಐಪಿಎಲ್​ನ ಎಂಟನೇ ಪಂದ್ಯ ಚೆನ್ನೈನ MA ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆದಿದ್ದು, ಪಂದ್ಯದಲ್ಲಿ ಏಕಪಕ್ಷೀಯ ಗೆಲುವು ದಾಖಲಿಸುವ ಮೂಲಕ ತನ್ನ ಬಹು ವರ್ಷಗಳ ಬರವನ್ನು ನೀಗಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 197 ರನ್ ಕಲೆಹಾಕಿದರೆ,
ಈ ಗುರಿ ಬೆನ್ನಟ್ಟಿದ ಸಿಎಸ್​ಕೆ, ಆರ್​ಸಿಬಿಯ ಕರಾರುವಕ್ಕಾದ ದಾಳಿಯ ಮುಂದೆ ಹೀನಾಯವಾಗಿ ಶರಣಾಯಿತು. ಈ ಗೆಲುವಿನೊಂದಿಗೆ ಆರ್​ಸಿಬಿ ಪಾಯಿಂಟ್ ಪಟ್ಟಿಯಲ್ಲೂ ತನ್ನ ಪಾರುಪತ್ಯವನ್ನು ಮುಂದುವರೆಸಿದೆ.

ಎರಡೂ ತಂಡಗಳು ಈ ಸೀಸನ್​ ಅನ್ನು ಗೆಲುವಿನೊಂದಿಗೆ ಆರಂಭಿಸಿವೆ. ಚೆನ್ನೈ ತಂಡ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿತ್ತು,ಇತ್ತ ಆರ್​ಸಿಬಿ, ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಅವರ ತವರು ನೆಲದಲ್ಲಿ ಸೋಲಿಸುವ ಮೂಲಕ ಉತ್ತಮ ಆರಂಭವನ್ನು ನೀಡಿತ್ತು.
ಆದ್ರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಚೆನ್ನೈನಲ್ಲಿ ಭರ್ಜರಿ ಗೆಲುವು ಸಾಧಿಸಿದೆ. 17 ವರ್ಷಗಳ ಬಳಿಕ ಆರ್ಸಿಬಿ, ತವರಿನಲ್ಲಿ ಸಿಎಸ್ಕೆಯನ್ನು ಮಣಿಸಿದೆ. ಆರ್ಸಿಬಿ ನೀಡಿದ 197 ರನ್​ಗಳ ಗುರಿ ಬೆನ್ನಟ್ಟಿದ ಸಿಎಸ್ಕೆ, ಆರ್ಸಿಬಿಯ ಉತ್ತಮ ಬೌಲಿಂಗ್ ದಾಳಿಯ ಮುಂದೆ ಹೀನಾಯವಾಗಿ ಸೋಲುಂಡಿತು.

Share post:

Subscribe

spot_imgspot_img

Popular

More like this
Related

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ:...

ಐ ಡ್ರಾಪ್ ಹಾಕಿಕೊಳ್ಳುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ!

ಐ ಡ್ರಾಪ್ ಹಾಕಿಕೊಳ್ಳುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ! ಐ ಡ್ರಾಪ್‌,...

ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​ ಘೋಷಣೆ: ವಾಮಾನ ಇಲಾಖೆ

ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​ ಘೋಷಣೆ: ವಾಮಾನ...

ರಾಜು ತಾಳಿಕೋಟಿ ಇನ್ನಿಲ್ಲ

ಖ್ಯಾತ ರಂಗ ಕಲಾವಿದ, ನಟ, ರಂಗನಿರ್ದೇಶಕ ರಾಜು ತಾಳಿಕೋಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ....