ಭಾರತ-ಪಾಕ್ ಸಂಘರ್ಷ: ಈ ಬಾರಿಯ IPL ಟೂರ್ನಿ ಸಂಪೂರ್ಣವಾಗಿ ಮುಂದೂಡಿಕೆ
ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದಾಗಿ ಐಪಿಎಲ್ ಪಂದ್ಯಾವಳಿ ಮುಂದೂಡಿಕೆ ಆಗಿದೆ. ದೆಹಲಿ ಮತ್ತು ಪಂಜಾಬ್ ನಡುವಿನ ಪಂದ್ಯ ಮುಂದೂಡಿದ ನಂತರ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಹೌದು ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರತೀಕಾರ ಸಮರ ನಡೆಯುತ್ತಿದ್ದು, ಯುದ್ಧದ ಭೀತಿ ಹೆಚ್ಚಾಗಿದೆ.
ಹೀಗಾಗಿ ಪ್ಲೇ ಆಫ್ಸ್ ಸೇರಿ ಇನ್ನೂ 16 ಪಂದ್ಯಗಳು ಬಾಕಿ ಇರುವಾಗಲೇ ಬಿಸಿಸಿಐ 2025ರ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿದೆ.
ಆಟಗಾರರ ಸುರಕ್ಷತೆಯಿಂದ ಇಂದಿನಿಂದ ನಡೆಯಬೇಕಿದ್ದ ಎಲ್ಲ ಐಪಿಎಲ್ ಪಂದ್ಯಾವಳಿಗಳನ್ನು ಬಿಸಿಸಿಐ ರದ್ದುಗೊಳಿಸಿದೆ. ಇದೇ ಮೇ 25ರ ತನಕ ಐಪಿಎಲ್ ಕ್ರಿಕೆಟ್ ಟೂರ್ನಿ ನಡೆಯಬೇಕಿತ್ತು. ಆದರೆ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವುದರಿಂದ ಎಲ್ಲ ಪಂದ್ಯಗಳನ್ನು ಅನಿರ್ದಿಷ್ಟಾವಧಿಯಾಗಿ ಮುಂದೂಡಲಾಗಿದೆ.
ವಿದೇಶಿ ಆಟಗಾರರ ಭದ್ರತೆಯ ದೃಷ್ಟಿಯಿಂದ BCCI ಯಾವುದೇ ಸವಾಲುಗಳನ್ನು ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲ. ಹೀಗಾಗಿ ದೇಶದಲ್ಲಿ ನಡೆಯಬೇಕಿದ್ದ ಈ ಬಾರಿಯ IPL ಟೂರ್ನಿಯನ್ನು ಸಂಪೂರ್ಣವಾಗಿ ಮುಂದೂಡಿಕೆ ಮಾಡಲಾಗಿದೆ.