ನೀರು ಇಲ್ಲವೇ ವಿಳಾಸ ಕೇಳುವ ನೆಪದಲ್ಲಿ ಸರಗಳ್ಳತನ ನಡೆಸುತ್ತಿದ್ದ ನಟೋರಿಯಸ್ ಇರಾನಿ ಗ್ಯಾಂಗ್‌ನ ಆರು ಮಂದಿಗೆ ಬೆಳಗಾವಿಯ 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಆರೋಪಿಗಳಾದ ಮಹಮದ್ ಇರಾನಿ ಶಾರುಕ್ ಶೇಖ್, ಅಬ್ಬಾಸ್ ಇರಾನಿ, ಹೈದರ್ ಇರಾನಿ, ರಫಿಕ್ ಶೇಖ್ ಮತ್ತು ಸಲೀಂ ಶೇಖ್ ಅವರಿಗೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ವೆಂಕಟೇಶ ನಾಯಕ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದರು.
ಸರ್ಕಾರದ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಐ.ಮಕಾಂದರ ವಾದ ಮಂಡಿಸಿದ್ದರು. ಆರೋಪಿಗಳು ಬೆಳಗಾವಿ ನಗರದಲ್ಲಿ 2015ರಲ್ಲಿ 33 ಕಡೆ ಸರಗಳವು ಮಾಡಿದ್ದರು.
ಮಹಾರಾಷ್ಟ್ರ ಮೂಲದ ಈ ಗ್ಯಾಂಗ್ ಬೈಕ್ ಗಳನ್ನು ಕದ್ದು ಅದರ ನಂಬರ್ ಪ್ಲೇಟ್ ಬದಲಿಸಿ ಸರಗಳ್ಳತನ ಮಾಡುತ್ತಿದ್ದರು. ಕದ್ದ ಸರಗಳನ್ನು ಪುಣೆಯಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಗಳು ಸರ್ವೀಸ್ ರಸ್ತೆಯಲ್ಲಿ ವಾಹನ ಚಲಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲಾ ಪೊಲೀಸ್ ಕಮಿಷನರ್ ಎಸ್ ರವಿ, ಆರೋಪಿಗಳನ್ನು ಸೆರೆ ಹಿಡಿಯಲು ವಿಶೇಷ ತಂಡ ರಚಿಸಿದ್ದರು.
POPULAR STORIES :
ರೈಲು ನಿಲ್ದಾಣದಲ್ಲಿ ಸೆಲ್ಫಿ ತೆಗೆದರೆ ಐದು ವರ್ಷ ಜೈಲು..!
ಕಿಂಗ್ ಖಾನ್‍ಗೆ ಅಮೇರಿಕಾ ವಿಮಾನ ನಿಲ್ದಾಣದಲ್ಲಿ ಮತ್ತೊಮ್ಮೆ ಪಪ್ಪಿ ಶೇಮ್…!
ಸೈಕಲ್ ಕದಿಯಲು ಇಡೀ ಮರವನ್ನೇ ಕತ್ತರಿಸಿದ ಕತರ್ನಾಕ್ ಕಳ್ಳ…!
ಸ್ಯಾಮ್ ಸಂಗ್ ಕಂಪನಿಯು ಭೀಕರ ರಹಸ್ಯದ ಬಗ್ಗೆ ಬಾಯ್ಮುಚ್ಕೊಂಡು ತೆಪ್ಪಗಿರೋಕೆ ಕೆಲಸಗಾರರಿಗೆ ಭಾರೀ ಮೊತ್ತ ನೀಡಿತ್ತಂತೆ
ಈ ಹಾಡನ್ನು ಕೇಳಿದವ್ರೆಲ್ಲಾ ಸುಸೈಡ್ ಮಾಡ್ಕೊಂಡ್ರಂತೆ…!
ದೇಶೀ ತಳಿ ಹಸುವಿನ ಸಗಣಿ ಸೇವಿದರೆ ನಾರ್ಮಲ್ ಡಿಲೆವರಿ…!
ಚಲಿಸುತ್ತಿರೋ ಟ್ರೈನ್ ನಲ್ಲಿದ್ದ R.B.I ನ 225 ಬಾಕ್ಸ್ ನಿಂದ 5.78 ಕೋಟಿ ರೂಪಾಯಿಗಳ ದರೋಡೆ ಮಾಡಿದ ಖದೀಮರು
ಒಲಿಂಪಿಕ್ಸ್ ನಲ್ಲಿ ಕಳ್ಳರ ಕಾಟ, ಭಯಭೀತರಾಗಿರುವ ಪ್ರವಾಸಿಗರು..! #Video