ಭಾರತೀಯ ಬಾಹ್ಯಾಕಾಶ ಕೇಂದ್ರ ಇತಿಹಾಸದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಆಂಧ್ರಪ್ರದೇಶ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಒಂದೇ ರಾಕೆಟ್ ಮೂಲಕ 20 ಉಪಗ್ರಹಗಳ ಉಡಾವಣೆ ಮಾಡಿ, ಹೊಸ ಇತಿಹಾಸ ಬರೆದಿದೆ. ಇದು ಹವಾಮಾನ, ಕೃಷಿ ಸೇರಿದಂತೆ ವಿವಿಧ ಮಾಹಿತಿ ನೀಡಲಿದ್ದು, ಭವಿಷ್ಯದಲ್ಲಿ ಹೊಸ ಸಾಧ್ಯತೆಯನ್ನು ಹುಟ್ಟುಹಾಕಿದೆ.
ಬಾಹ್ಯಾಕಾಶ ಕ್ಷೇತ್ರದಲ್ಲಿ ಹಲವಾರು ಮೈಲಿಗಲ್ಲುಗಳನ್ನು ಸ್ಥಾಪಿಸಿರೋ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಂದು ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಒಂದೇ ರಾಕೆಟ್ ಮೂಲಕ 20 ವಿವಿಧ ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ಇಡೀ ಜಗತ್ತೆ ಮತ್ತೊಮ್ಮೆ ಭಾರತದತ್ತ ನೋಡುವಂತೆ ಮಾಡಿದೆ.
ಇಂದು ಬೆಳಗ್ಗೆ 9.26ಕ್ಕೆ ಶ್ರೀಹರಿಕೋಟಾದಿಂದ ಒಂದೇ ರಾಕೆಟ್ ಮೂಲಕ 20 ವಿವಿಧ ಉಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. 20 ಉಪಗ್ರಹಗಳ ಒಟ್ಟು ತೂಕ 1288 ಕೆಜಿ ಆಗಿದ್ದು, ಉಡಾವಣೆ 26 ನಿಮಿಷಗಳಲ್ಲಿ ಪೂರ್ಣಗೊಂಡಿತು. ಈ ಮೂಲಕ 20 ಉಪಗ್ರಹಗಳನ್ನು ನಭೋಮಂಡಲಕ್ಕೆ ಹಾರಿಸಿದ ವಿಶ್ವದ 2ನೇ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಸ್ವದೇಶಿ ನಿರ್ವಿುತ ಕಾಟೋಸ್ಯಾಟ್ 2-ಸಿ ಉಪಗ್ರಹ ಬಾಹ್ಯಾಕಾಶದಿಂದ ಭೂಮಿಯ ಮೇಲೆ ನಿಗಾವಹಿಸಲಿದ್ದು, ಗಡಿ ಪ್ರದೇಶ, ಕರಾವಳಿ ಪ್ರದೇಶ, ಹವಾಮಾನ, ಕೃಷಿ, ಭೂ ನಕ್ಷೆ ಸೇರಿದಂತೆ ಹಲವು ಮಾಹಿತಿಗಳನ್ನು ನೀಡಲಿದೆ. ಉಡಾವಣೆಯಾಗಲಿರುವ 20 ಉಪಗ್ರಹಗಳ ಪೈಕಿ ಅಮೆರಿಕ, ಕೆನಡಾ, ಜರ್ಮನಿ ಹಾಗೂ ಇಂಡೋನೇಷ್ಯಾದ ಉಪಗ್ರಹಗಳು ಇವೆ.
ಈ ಹಿಂದೆ ಒಂದೇ ರಾಕೆಟ್‌ನಲ್ಲಿ ಅತಿ ಹೆಚ್ಚು ಸಂಖ್ಯೆಯ ಉಪಗ್ರಹಗಳ ಉಡಾವಣೆ ಮಾಡಿದ ದಾಖಲೆ ರಷ್ಯಾ ಹೆಸರಲ್ಲಿದ್ದು, ರಷ್ಯಾದ ಡ್ನೆಪರ್ ಸಿಲೋ ರಾಕೆಟ್ ಮೂಲಕ 2014ರ ಜೂನ್ 19 ರಂದು 33 ಉಪಗ್ರಹಗಳನ್ನು ಒಂದೇ ಬಾರಿ ಉಡಾವಣೆ ಮಾಡಲಾಗಿತ್ತು. ಇದೀಗ ಎರಡನೇ ಸ್ಥಾನದಲ್ಲಿ ಭಾರತ ವಿರಾಜಮಾನವಾಗಿದೆ.
ಇನ್ನು ಇಸ್ರೋ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಒಟ್ಟಾರೆ ನಮ್ಮ ಇಸ್ರೋ ವಿಜ್ಞಾನಿಗಳ ಈ ಸಾಧನೆಯಿಂದಾಗಿ ಪ್ರಪಂಚದ ಬಲಿಷ್ಠ ರಾಷ್ಟ್ರಗಳು ಸಹ ಭಾರತದತ್ತ ತಿರುಗಿ ನೋಡುತ್ತಿವೆ.
- ಶ್ರೀ
POPULAR STORIES :
ಕಾರ್ಮಿಕ ನಿದ್ರೆ ಮಾಡಿದ್ದಕ್ಕೆ ಬಟ್ಟೆ ಬಿಚ್ಚಿ ಹೊಡೆದ ಅವಿವೇಕಿ ಅಧಿಕಾರಿ..!
ಸಲ್ಮಾನ್ ಗಿದೋ ಬಿಸಿ ಬಿಸಿ ಕಜ್ಜಾಯ..!
ರೈಲು ನಿಲ್ದಾಣದಲ್ಲಿ ಪುಕ್ಕಟೆ ವೈ-ಫೈನಲ್ಲಿ ಭಾರತೀಯರು ಏನ್ ಹುಡುಕುತ್ತಾರೆ? ಗೂಗಲ್ ಬಯಲು ಮಾಡಿದ ರಹಸ್ಯ!
ಅಡುಗೆ ಮನೆಯಲ್ಲಿ ಅಡಗಿಸಿಟ್ಟ ಔಷಧಿಗಳು..!!
ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಯಾರಿಗೆ ಯಾವ ಖಾತೆ ಎನ್ನುವ ವಿವರ ಇಲ್ಲಿದೆ