ವಿದ್ಯಾಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ

Must read

ಬೆಂಗಳೂರು : ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ವಿದ್ಯಾಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕೃಷ್ಣದೇವರಾಯ ಶಿಕ್ಷಣ ಸಂಸ್ಥೆ, ರೇವಾ ವಿಶ್ವವಿದ್ಯಾಲಯ ಸೇರಿದಂತೆ ನಗರದ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಸುಮಾರು 45 ಕಡೆ ಐಟಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.

 

 

ಸುಮಾರು 70 ವಾಹನಗಳಲ್ಲಿ ಐಟಿ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ಮಾಡಿದ್ದಾರೆ. ತೆರಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆ ಇಂದು ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ಮುಂದಾಗಿದ್ದಾರೆ.

- Advertisement -spot_img

More articles

- Advertisement -spot_img

Latest article