ಈದ್ಗಾ ಮೈದಾನದಲ್ಲಿ ಶಿವಲಿಂಗ ಸ್ಥಾಪಿಸುತ್ತೇವೆ …!

Date:

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದು, ಇಂದು ಸಂಜೆ ಕೇಂದ್ರ ವಿಭಾಗದ ಡಿಸಿಪಿ ನೇತೃತ್ವದಲ್ಲಿ ಶಾಂತಿ ಸಭೆ ಕರೆಯಲಾಗಿದೆ. ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಘೋಷಣೆ ಮಾಡಿದ್ದ ಬೆನ್ನಲ್ಲೇ ಗಣೇಶೋತ್ಸವ ಆಚರಣೆಗೆ ಹಿಂದು ಪರ‌ ಸಂಘಟನೆಗಳು ಮುಂದಾಗಿವೆ. ಆದರೆ ಶಾಸಕ‌ ಜಮೀರ್ ಅಹ್ಮದ್ ಖಾನ್ ವಿರೋಧ ವ್ಯಕ್ತಪಡಿಸಿದ್ದಾರೆ.

ಇದರಿಂದ ಕೆರಳಿರುವ ಹಿಂದು ಸಂಘಟನೆಗಳು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡದೇ ಇದ್ದರೆ ರಾತ್ರೋರಾತ್ರಿ ಶಿವಲಿಂಗ ಸ್ಥಾಪನೆ ಮಾಡುವುದಾಗಿ ತಿರುಗೇಟು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿಪಿ ನೇತೃತ್ವದಲ್ಲಿ ಶಾಂತಿ ಸಭೆ ಕರೆಯಲಾಗಿದೆ. ಜತೆಗೆ ಜಿಲ್ಲಾಧಿಕಾರಿ ಭೇಟಿ ಮಾಡಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಅಧಿಕೃತ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ.

Share post:

Subscribe

spot_imgspot_img

Popular

More like this
Related

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು?

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು? ನಮ್ಮ...

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...