ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ಜಯಲಲಿತಾ ಡ್ಯಾನ್ಸ್ ಪೋಸ್ಟರ್..!

Date:

ಒಂದು ಕಡೆ ಕಾವೇರಿ ನದಿ ವಿವಾದ ಕುರಿತಂತೆ ಕರ್ನಾಟಕದ ಜನತೆ ತಮಗಾಗಿರುವ ಅನ್ಯಾಯವನ್ನು ಖಂಡಿಸಿ ತಮಿಳುನಾಡು ಸಿಎಂ ಜಯಲಲಿತಾ ವಿರುದ್ದ ಆಕ್ರೋಶ ವ್ಯಕ್ತ ಪಡಿಸುತ್ತಿದ್ದರೆ, ಮತ್ತೊಂದೆಡೆ 50 ವರ್ಷಗಳ ಹಿಂದೆ ಮಂಡ್ಯ ಜಿಲ್ಲೆಯ ಶಾಲೆಯೊಂದರ ಕಟ್ಟಡ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಸಹಾಯಾರ್ಥಕ್ಕಾಗಿ ಮೈಸೂರು ಜಿಲ್ಲೆಯಲ್ಲಿ ನೃತ್ಯ ಪ್ರದರ್ಶನ ಮಾಡಿದ ಜಯಲಲಿತಾ ಅವರ ಪೋಸ್ಟರ್ ಇದೀಗ ಭಾರೀ ಗಾಸಿಪ್ ಸೃಷ್ಟಿಸಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ತಾಲ್ಲೂಕು ನಗುವನ ಹಳ್ಳಿಯ ಶಾಲಾ ಕಟ್ಟ್ಟಡ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಕಾರ್ಯವನ್ನು ಅಂದು ಆಯೋಜನೆ ಮಾಡಲಾಗಿದ್ದು, ಜಯಲಲಿತಾ ಅವರು 1967ರ ವೇಳೆ ನೃತ್ಯ ಪ್ರದರ್ಶನ ಮಾಡಿದ್ದರು. ಮೈಸೂರಿನ ಹಿರಿಯ ಪತ್ರಕರ್ತರಾದ ಈಚನೂರು ಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ನಿಧಿ ಸಂಗ್ರಹಣಾ ಕಾರ್ಯಕ್ರಮದಲ್ಲಿ, ಅಂದಿನ ನೃತ್ಯ ಪ್ರದರ್ಶನದ ಪೋಸ್ಟರ್ ಇದೀಗ ಫೇಸ್‍ಬುಕ್, ವಾಟ್ಸಾಪ್, ಟ್ವಿಟರ್ ಸೇರಿದಂತೆ ಅನೇಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
1967ರಲ್ಲಿ ಕನ್ನಡ ಮತ್ತು ತಮಿಳು ಭಾಷೆಯ ಬಹು ಬೇಡಿಕೆಯ ನಟಿಯಾಗಿದ್ದ ಜಯಲಲಿತಾ ಪ್ರತಿಭಾನ್ವಿತ ಹಾಗೂ ಚಂದುಳ್ಳಿ ಚಲುವಿನ ನಟಿಯಾಗಿದ್ದರು. ಆ ಸಮಯದಲ್ಲಿ ನಗುವನ ಹಳ್ಳಿಯ ಜನರು ಇವರನ್ನು ಭೇಟಿಯಾಗಿ ಶಾಲಾ ಕಟ್ಟಡಕ್ಕೆ ನಿಧಿ ಸಂಗ್ರಹ ಮಾಡುವ ಉದ್ದೇಶದಿಂದ ನೀವು ನೃತ್ಯ ಕಾರ್ಯಕ್ರಮ ನಡೆಸಿಕೊಡಬೇಕೆಂದು ಕೇಳಿಕೊಂಡಾಗ, 19ರ ಹರೆಯದ ಜಯಲಲಿತಾ ತಮ್ಮೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಒಂದೇ ಮಾತಿನಲ್ಲಿ ಒಪ್ಪಿಕೊಂಡರಂತೆ. 1967ರ ಮಾ. 19 ರಂದು ಮೈಸೂರು ವಿಶ್ವ ವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಆಯೋಜಿಸಲಾಗಿದ್ದ ನೃತ್ಯ ಕಾರ್ಯಕ್ರಮದಲ್ಲಿ ಜಯಲಲಿತಾ ನೃತ್ಯ ಪ್ರದರ್ಶನ ಮಾಡಿದ್ದರು. ಅಂದು ಈ ನೃತ್ಯ ಪ್ರದರ್ಶನ ನೋಡಲು ಬಂದ ಜನರಿಗೆ 10, 25 ಹಾಗೂ 50ರೂ. ನಂತೆ ಟಿಕೇಟ್ ದರ ನಿಗಧಿ ಮಾಡಲಾಗಿತ್ತು.

433455

ಈ ಕಾರ್ಯಕ್ರಮ ವೀಕ್ಷಿಸಲು ಜನರು ತಂಡೋಪ ತಂಡವಾಗಿ ಆಗಮಿಸಿದ್ದು, ದೇಣಿಗೆ ರೂಪದಲ್ಲಿ 25 ಸಾವಿರ ಹಣ ಸಂಗ್ರಹವಾಗಿತ್ತು. ಇದರಲ್ಲಿ ಜಯಲಲಿತಾ ಅವರಿಗೆ 5 ಸಾವಿರ ರೂ ಸಂಭಾವನೆ ನೀಡಲಾಗಿತ್ತು ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಮೈಸೂರಿನ ನಾನಾ ಚಿತ್ರ ಮಂದಿರಗಳಲ್ಲಿ ಜಯಲಲಿತಾ ನೃತ್ಯ ಪ್ರದರ್ಶನ ಮಾಡುವ ಜಾಹಿರಾತನ್ನು ಪ್ರಕಟಣೆ ಮಾಡಲಾಗಿತ್ತು. ಆ ಫೋಸ್ಟರ್ ಇಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ಬಿಟ್ಟಿದೆ.

 

POPULAR  STORIES :

ತಿಂಗಳಲ್ಲಿ ಎರಡನೇ ಬಾರಿ ಪೆಟ್ರೊಲ್ ದರ ಏರಿಕೆ…!

ತಾಮ್ರದ ಪಾತ್ರೆಯಲ್ಲಿ ಕೂಡಿಟ್ಟ ನೀರನ್ನು ಸೇವಿಸುವುದು ಉತ್ತಮ ಯಾಕೆ..?

ಪತಂಜಲಿಯ ಸಿ.ಇ.ಒ ಆಚಾರ್ಯ ಬಾಲಕೃಷ್ಣ , ಈಗ ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರು..!

ಸಿರಿಯಾ ದೇಶದ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಯಿಂದ ರಕ್ಷಿಸಲು ಪಣ ತೊಟ್ಟು ನಿಂತ ದಿಟ್ಟ ಮಹಿಳೆ.

ಬಿಎಸ್‍ಎನ್‍ಎಲ್ ಜೊತೆ ಜಿಯೋ ಒಪ್ಪಂದ…!

ಬಂದ್ ಎಫೆಕ್ಟ್: ರಾಜ್ಯಕ್ಕೆ ಇಪ್ಪತ್ತೈದು ಸಾವಿರ ಕೋಟಿ ಲಾಸ್..!

ಪ್ಯಾರಾಲಿಂಪಿಕ್‍ನಲ್ಲಿ ಭಾರತಕ್ಕೆ ಬೆಳ್ಳಿಯ ಬೆಳಕು ನೀಡಿದ ದೀಪಾ..

ಸೀದಾ ಮನೆಗೆ ಬಂದ ನಾನು ನಡೆದ ಘಟನೆಯನ್ನೆಲ್ಲಾ ನನ್ನ ಮಗನ ಬಳಿ ಹೇಳಿಕೊಂಡೆ..

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...