No menu items!
12.1 C
Munich
Saturday, May 2, 2026

ಜಯಲಲಿತಾ ಡಿಸ್ಚಾರ್ಜ್..!!!

Must read

ಕಳೆದ 15 ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿರುವ ತಮಿಳುನಾಡು ಅಮ್ಮಾ ಜಯಲಲಿತಾ ಅವರು ಶೀಘ್ರದಲ್ಲೇ ಡಿಸ್ಚಾರ್ಜ್ ಆಗುವ ಸಂಭವವಿದೆ. ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎಂದ ಮಾತ್ರಕ್ಕೆ ಅವರು ಆರೋಗ್ಯವಾಗಿದ್ದಾರೆ ಎಂದಲ್ಲ ಬದಲಾಗಿ ಅವರು ಡಿಸ್ಚಾರ್ಜ್ ಆಗ್ತಾ ಇರೋ ಕಾರಣವೇ ಬೇರೆ ಇದ್ಯಂತೆ ನೋಡಿ.. ಅವರನ್ನು ಡಿಸ್ಚಾರ್ಜ್ ಮಾಡಲು ಇರುವ ಕಾರಣವೇ ಅವರಿಗೆ ನೀಡ್ತಾ ಇರೋ ಫುಲ್ ಸೆಕ್ಯೂರಿಟಿ.. ಹೌದು. ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿರುವ ಸಿಎಂ ಜಯಲಲಿತಾ ಅವರಿಗೆ ಭದ್ರತೆ ಒದಗಿಸುವ ದೃಷ್ಠಿಯಿಂದ ಸುಮಾರು 500 ಮೀಟರ್ ವ್ಯಾಪಿಯವರೆಗೆ ಸಂಚಾರ ನಿಷೇಧಿಸಲಾಗಿದೆ. ಅಲ್ಲದೇ ಅಪೋಲೋ ಆಸ್ಪತ್ರೆಯ ಸುತ್ತಲೂ ಮೂರು ಪೊಲೀಸ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಈ ಕಾರಣದಿಂದಾಗಿ ಅಪೋಲೋ ಆಸ್ಪತ್ರೆಗೆ ಬರುವ ಇತರೆ ರೋಗಿಗಳಿಗೆ ಬಹಳ ತೊಂದರೆಯಾಗುತ್ತಿರುವ ಕಾರಣದಿಂದಾಗಿ ಜಯಲಲಿತಾ ಅವರನ್ನು ಡಿಸ್ಚಾರ್ಜ್ ಮಾಡಲು ನಿರ್ಧರಿಸಿದ್ದಾರೆ. ವಿಪರ್ಯಾಸ ಅಂದ್ರೆ ಜಯಲಲಿತಾ ಅವರಿಗೆ ಚಿಕಿತ್ಸೆ ನೀಡುವ ಸಲುವಾಗಿಯೇ ಚೆನ್ನೈನ ಫೋಯಾಸ್ ಗಾರ್ಡನ್‍ನಲ್ಲಿ ಅವರಿಗಾಗಿಯೇ ಒಂದು ಸಣ್ಣ ಆಸ್ಪತ್ರೆಯೂ ಕೂಡ ನಿರ್ಮಾಣವಾಗ್ತಾ ಇದೆಯಂತೆ.. ಇನ್ನು ಈ ಆಸ್ಪತ್ರೆಯಲ್ಲಿ ಐ.ಸಿ.ಯು. ವೆಂಟಿಲೇಟರ್ ಸೇರಿದಂತೆ ಜಯಲಲಿತಾ ಅವರಿಗೆ ಉಪಯೋಗವಾಗುವಂತಹ ಎಲ್ಲಾ ವ್ಯವಸ್ಥೆಗಳನ್ನು ಅಲ್ಲಿ ಮಾಡಲಾಗಿದೆ. ದಿನದ 24 ಗಂಟೆಗಳ ಕಾಲ ವೈದ್ಯರ ತಂಡ ಅಲ್ಲಿ ನಿಯೋಜನೆಗೊಳ್ಳಲಿದ್ದಾರೆ. ಈ ವಾರದಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಹೋಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Like us on Facebook  The New India Times

POPULAR  STORIES :

ನೀವು ಕುಡಿಯೋದು ಕೂಲ್‍ಡ್ರಿಂಕ್ಸ್ ಅಲ್ಲ ಬದಲಾಗಿ ವಿಷ..!

ಧೋನಿ ಚಿತ್ರದಲ್ಲಿ ಸ್ವಂತ ಅಣ್ಣನ ಪಾತ್ರವೇ ಇಲ್ಲ ಯಾಕೆ ಗೊತ್ತಾ..?

ಮತ್ತೊಂದು ಮದುವೆ ವದಂತಿ ಸುಳ್ಳು: ರಾಧಿಕಾ ಕುಮಾರ ಸ್ವಾಮಿ.

24ರ ಹರೆಯದ ಯುವತಿ 68ರ ತಾತನ ಅಚ್ಚರಿಯ ಜುಗಲ್‍ಬಂಧಿ…!

ಲೋಧಾ ಶಿಫಾರಸ್ಸು ಉಲ್ಲಂಘನೆ: 3ನೇ ಟೆಸ್ಟ್ ಪಂದ್ಯ ನಡೆಯೋದು ಬಹುತೇಕ ಡೌಟ್..?

ಪಾಕ್ ವಿರುದ್ದದ ಆನ್ಲೈನ್ ಅರ್ಜಿಯನ್ನು ಆರ್ಕೈವ್ ಪಟ್ಟಿಗೆ ಹಾಕಿ ತನ್ನ ದ್ವಂದ್ವ ನಿಲುವು ಪ್ರದರ್ಶಿದ ಅಮೇರಿಕಾ..!

ಚೆನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿರೋ ಜಯಲಲಿತಾ ಈಗ ಹೇಗಿದ್ದಾರೆ?

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article