No menu items!
19.8 C
Munich
Saturday, August 1, 2026

JDS ನಿಂದ ಪ್ರಜ್ವಲ್ ರೇವಣ್ಣ ಅಮಾನತಿಗೆ ಆಗ್ರಹಿಸಿ ಪತ್ರ ಬರೆದ ಶರಣಗೌಡ ಕಂದಕೂರ್

Must read

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್ ಶಾಸಕ ಒತ್ತಾಯ ಮಾಡಿದ್ದಾರೆ. ಪ್ರಜ್ವಲ್ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು ವರಿಷ್ಠ, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರಿಗೆ ಪತ್ರ ಬರೆದು, ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ.
ಕೆಲ ದಿನಗಳಿಂದ ಹರದಾಡುತ್ತಿರುವ ವಿಡಿಯೋದಿಂದ ಮುಜುಗರವಾಗಿದೆ. ಈ ವಿಡಿಯೋಗಳಲ್ಲಿ ಪ್ರಜ್ವಲ್ ರೇವಣ್ಣ ಕಾಣಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಪ್ರಜ್ವಲ್ ತಪ್ಪಿತಸ್ಥರು ಎಂಬ ಭಾವನೆ ಉಂಟಾಗಿದೆ. ದೇವೇಗೌಡರು, ಹೆಚ್ಡಿ ಕುಮಾರಸ್ವಾಮಿ ಅವರು ಹೆಣ್ಣು ಮಕ್ಕಳಿಗೆ ಗೌರವ ನೀಡುತ್ತಾ ಬಂದಿದ್ದಾರೆ. ಹೆಚ್ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಲಾಟರಿ ನಿಷೇಧ ಮಾಡಿದ್ದರು.
ಲಾಟರಿ ನಿಷೇಧಿಸಿ ಹೆಣ್ಣು ಮಕ್ಕಳ ಪುಣ್ಯಕ್ಕೆ ಪಾತ್ರರಾಗಿದ್ದಾರೆ. ಪಕ್ಷದ ಚಿಹ್ನೆಯಲ್ಲಿ ಭತ್ತದ ತೆನೆಹೊತ್ತ ಮಹಿಳೆಯ ಚಿತ್ರ ಇದೆ. ಭತ್ತದ ತೆನೆಹೊತ್ತ ಮಹಿಳೆಯ ಚಿತ್ರ ಹೆಣ್ಣಿನ ಗೌರವವನ್ನ ಪ್ರತಿಪಾದಿಸುತ್ತೆ. ಇಂತಹ ಪರಂಪರೆ ಹೊಂದಿರುವ ಪಕ್ಷಕ್ಕೆ ಮುಜುಗರ ತಂದಿರುವುದು ಸುಳ್ಳಲ್ಲ. ಹೀಗಾಗಿ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

- Advertisement -spot_img

More articles

- Advertisement -spot_img

Latest article