ಜೆಡಿಎಸ್ ಅಭ್ಯರ್ಥಿಗಳ ಲಿಸ್ಟ್ ನಲ್ಲಿ ಯಾರ್ ಯಾರಿದ್ದಾರೆ ?

Date:

ನಾಡದೇವಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮೈಸೂರು ಭಾಗದ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನ ಜಿ.ಟಿ.ದೇವೇಗೌಡ ಘೋಷಿಸಿದ್ದಾರೆ. ಚಾಮುಂಡೇಶ್ವರಿಗೆ ಜಿ.ಟಿ.ದೇವೇಗೌಡ, ಹುಣಸೂರಿಗೆ ಪುತ್ರ ಹರೀಶ್ ಗೌಡ, ಕೆ.ಆರ್.ನಗರಕ್ಕೆ ಸಾ.ರಾ.ಮಹೇಶ್, ಪಿರಿಯಾಪಟ್ಟಣಕ್ಕೆ ಕೆ.ಮಹದೇವ್, ಟಿ.ನರಸೀಪುರಕ್ಕೆ ಅಶ್ವಿನ್ ಕುಮಾರ್, H.D.ಕೋಟೆಗೆ ಜಯಪ್ರಕಾಶ್ಗೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅಭ್ಯರ್ಥಿಗಳನ್ನ ಜಿಟಿದೇವೇಗೌಡ್ರು ಘೋಷಿಸಿದ್ರು. ನಾನು ನಿನ್ನೆಯಿಂದಲೇ ಜೆಡಿಎಸ್ ಸಂಘಟನೆಯಲ್ಲಿ ತೊಡಗಿದ್ದೇನೆ. ನನ್ನ ಮನಸ್ಸು ಮೂರು ವರ್ಷಗಳ ನಂತರ ಸಮಾಧಾನದಲ್ಲಿದೆ. ನಾನು, ನನ್ನ‌ ಕುಟುಂಬ ಖುಷಿಯಲ್ಲಿದೆ, ಯಾವ ಗೊಂದಲಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ರು.. ಚಾಮುಂಡಿ ತಾಯಿಗೆ ಹೆಚ್‌ ಡಿ ದೇವೇಗೌಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನೊಂದು ತಿಂಗಳಿನಲ್ಲಿ ನಾನು ವಾಕ್ ಮಾಡುವ ಶಕ್ತಿಕೊಡು ಎಂದು ತಾಯಿ ಮುಂದೆ ಬೇಡಿ ಕೊಂಡಿದ್ದಾರೆ. ಜನವರಿ ತಿಂಗಳಿನಲ್ಲಿ ಹೆಚ್‌ ಡಿ ದೇವೇಗೌಡರು ಚಂಡಿಕಾ ಹೋಮ ನಡೆಸಲಿದ್ದಾರೆ. ಹೆಚ್ ಡಿ ದೇವೇಗೌಡರ ಉತ್ಸಾಹ ಕಂಡು ನಾವೇ ಅಚ್ಚರಿಗೆ ಒಳಗಾಗಿದ್ದೇವೆ. ಅವರೇ ನಮಗೆ ಪ್ರೇರಣೆಯಾಗಿದ್ದಾರೆ. ಅವರನ್ನು ಸಂತೋಷವಾಗಿಡುವುದೇ ನಮ್ಮ ಸಂತೋಷ ಎಂದು ತಿಳಿಸಿದ್ರು..

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...