ರಾಜ್ಯದಲ್ಲಿ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗದಿಂದ 1142 ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲು ಪತ್ರ ಬರೆಯಲಾಗಿದೆ. ಅದರನ್ವಯ 190 ಪುರುಷ ಹಾಗೂ 202 ಮಹಿಳಾ ನಿಲಯ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಲೋಕಸೇವಾ ಆಯೋಗವು ಪ್ರಕಟಿಸಿದೆ. ಆದಷ್ಟು ಶೀಘ್ರ ಇವರುಗಳಿಗೆ ಸ್ಥಳ ನಿಯುಕ್ತಿ ಮಾಡಲಾಗುವುದು ಎಂದು ಹೇಳಿದರು. ರಾಜ್ಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಈಗ ಕೆಪಿಎಸ್ಸಿ ನೀಡುವ ಪಟ್ಟಿಯ ಪ್ರಕಾರ ಮೇಲ್ವಿಚಾರಕರನ್ನು ವಿದ್ಯಾರ್ಥಿನಿಲಯಗಳಿಗೆ ಸ್ಥಳ ನಿಯುಕ್ತಿ ಮಾಡುತ್ತೇವೆ. ಇದಾದ ನಂತರವೂ ಖಾಲಿ ಉಳಿದರೆ ಗುತ್ತಿಗೆ ಆಧಾರದ ಮೇಲೆ ಮೇಲ್ವಿಚಾರಕರನ್ನು ನೇಮಿಸಿಕೊಳ್ಳುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.
ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಕ್ರಮ
Date: