ಡಿಸೆಂಬರ್ 14ರಂದು ಮಂಡ್ಯ ಜಿಲ್ಲಾಡಳಿತ ವತಿಯಿಂದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಸಿಎಂ ಬೊಮ್ಮಾಯಿರಿಂದ ಉದ್ಘಾಡಿಸಲಿದ್ದಾರೆ ಎಂದು ಮಂಡ್ಯ ಡಿಸಿ H.N.ಗೋಪಾಲಕೃಷ್ಣ ತಿಳಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಅವರು, PES ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ಸುಮಾರು 100ಕ್ಕೂ ಹೆಚ್ಚು ಪ್ರಸಿದ್ಧ ಕಂಪನಿಗಳು ಭಾಗಿಯಾಗಲಿದೆ. ಉದ್ಯೋಗ ಮೇಳದಲ್ಲಿ ಸುಮಾರು 5,000ಕ್ಕೂ ಹೆಚ್ಚು ಉದ್ಯೋಗ ಕಲ್ಪಿಸುವ ಗುರಿ ಹೊಂದಲಾಗಿದೆ. ಹೀಗಾಗಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಡಿಸಿ H.N.ಗೋಪಾಲಕೃಷ್ಣ ಮನವಿ ಮಾಡಿದ್ದಾರೆ..
ಬೃಹತ್ ಉದ್ಯೋಗ ಮೇಳ ಎಲ್ಲಿ ಗೊತ್ತಾ ?
Date: