ಇರಾನ್–ಇಸ್ರೇಲ್ ಯುದ್ಧ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸಜ್ಜು – ಸಚಿವ ಜೋಶಿ

Date:

ಇರಾನ್–ಇಸ್ರೇಲ್ ಯುದ್ಧ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸಜ್ಜು – ಸಚಿವ ಜೋಶಿ

ನವದೆಹಲಿ: ಇರಾನ್–ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ವಿದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸರ್ವಸನ್ನದ್ಧವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ರಾಯಭಾರಿ ಕಚೇರಿಗಳ ಉನ್ನತ ಅಧಿಕಾರಿಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಪರಿಸ್ಥಿತಿಯನ್ನು ಸಮೀಕ್ಷೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
“ಜಗತ್ತಿನ ಎಲ್ಲೇ ಆಗಲಿ ಕನ್ನಡಿಗರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದಾಗ ಅವರನ್ನು ಸುರಕ್ಷಿತವಾಗಿ ವಾಪಸ್ ಕರೆತರುವ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದೆ. ಹಿಂದೆ ಉಕ್ರೇನ್ನಲ್ಲಿ ಯುದ್ಧದ ವೇಳೆ ಸಿಲುಕಿದ್ದ ಭಾರತೀಯರನ್ನು ಯಶಸ್ವಿಯಾಗಿ ಕರೆತಂದಿದ್ದೇವೆ. ಭಾರತೀಯರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ,” ಎಂದು ಜೋಶಿ ಹೇಳಿದರು.
ಇರಾನ್–ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಸಂಬಂಧ ಹಿರಿಯ ಸಚಿವರೊಂದಿಗೆ ತುರ್ತು ಚರ್ಚೆ ನಡೆಸಲಾಗಿದೆ. ಎಲ್ಲ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.
“ಕನ್ನಡಿಗರು ಮಾತ್ರವಲ್ಲ, ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಪೂರ್ಣ ಸಿದ್ಧವಾಗಿದೆ. ಈಗಾಗಲೇ ರಾಯಭಾರಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಯಾರೂ ಆತಂಕ ಪಡಬೇಕಿಲ್ಲ,” ಎಂದು ಸಚಿವರು ಆತಂಕಿತ ಕುಟುಂಬಸ್ಥರಿಗೆ ಭರವಸೆ ನೀಡಿದರು.
ಯುದ್ಧಪೀಡಿತ ಪ್ರದೇಶಗಳಲ್ಲಿ ವಿಮಾನ ಸಂಚಾರ ಅಪಾಯಕರವಾಗಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಪಡೆಯಲಾಗುತ್ತಿದೆ. ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಭೋಜೇಗೌಡರು ಸೇರಿದಂತೆ ಸಂಕಷ್ಟದಲ್ಲಿರುವ ಎಲ್ಲಾ ಕನ್ನಡಿಗರ ರಕ್ಷಣೆಗೆ ಸರ್ಕಾರ ಶ್ರಮಿಸುತ್ತಿದೆ ಎಂದು ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದರು.

Share post:

Subscribe

spot_imgspot_img

Popular

More like this
Related

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ ಹಾವೇರಿ: ಇರಾನ್...

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ ಇಂದಿನ ಜೀವನಶೈಲಿಯಲ್ಲಿ...

Ali Khamenei ನಿಧನ: ಇರಾನ್‌ನಲ್ಲಿ 40 ದಿನಗಳ ಶೋಕಾಚರಣೆ ಘೋಷಣೆ

Ali Khamenei ನಿಧನ: ಇರಾನ್‌ನಲ್ಲಿ 40 ದಿನಗಳ ಶೋಕಾಚರಣೆ ಘೋಷಣೆ ತೆಹ್ರಾನ್: ಇರಾನ್‌ನ...

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್ ಧಾರವಾಡ:...